ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಟ ಪ್ರಕಾಶ್ ರಾಜ್ ಅವರು ಘೋಷಣೆ ಮಾಡಿರುವ ಹಿನ್ನಲೆಯಲ್ಲಿ ಆಮ್ ಆದ್ಮಿ ಪಕ್ಷ ಪ್ರಕಾಶ್ ರಾಜ್ ಅವರಿಗೆ ಶನಿವಾರ ಬೆಂಬಲ ವ್ಯಕ್ತಪಡಿಸಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ಟೀಕೆ ಮಾಡುತ್ತಿದ್ದ ಪ್ರಕಾಶ್ ರಾಜ್ ಅವರು ಮಂಗಳವಾರವಷ್ಟೇ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಣೆ ಮಾಡಿತ್ತು.
ಈ ಹಿನ್ನಲೆಯಲ್ಲಿ ಇಂದು ನಗರದಲ್ಲಿ ಪ್ರಕಾಶ್ ರಾಜ್ ಅವರನ್ನು ಭೇಟಿಯಾಗಿ ಮಾತಕತೆ ನಡೆಸಿರುವ ಆಪ್ ನಾಯಕ ಮನೀಷ್ ಸಿಸೋಡಿಯಾ ಅವರು, ನಟನಿಗೆ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ.
ಪ್ರಕಾಶ್ ರಾಜ್ ಅವರ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಉತ್ತಮ ವ್ಯಕ್ತಿಗಳನ್ನು ರಾಜಕೀಯಕ್ಕೆ ಸ್ವಾಗತಿಸುತ್ತೇವೆಂದಿದ್ದಾರೆ. ಇದರಂತೆ ಪಕ್ಷದ ಅಧಿಕೃತ ಟ್ವಿಟರ್ ಖಾತೆಯಲ್ಲಿಯೂ ನಟ ಪ್ರಕಾಶ್ ರಾಜ್ ಅವರಿಗೆ ಬೆಂಬಲ ನೀಡುವುದಾಗಿ ಆಮ್ ಆದ್ಮಿ ಪಕ್ಷ ತಿಳಿಸಿದೆ.
ಆಮ್ ಆದ್ಮಿ ಬೆಂಬಲ ನೀಡಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಪ್ರಕಾಶ್ ರಾಜ್ ಅವರು ಧನ್ಯವಾದಗಳನ್ನು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics