ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಭೀಕರ ಅಪಘಾತವೊಂದು ಸಂಭವಿಸಿದ್ದು, ಶಾಲಾ ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ಖಾಸಗಿ ಬಸ್ ವೊಂದು ಕಂದಕ್ಕೆ ಉರುಳಿ ಬಿದ್ದ ಪರಿಣಾಮ ಚಾಲಕ ಸೇರಿ ಒಟ್ಟು 7 ಮಂದಿ ಸಾವನ್ನಪ್ಪಿರುವ ಘಟನೆ ಸಿರ್ಮೌರ್ ಜಿಲ್ಲೆಯಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ.
ಅಪಘಾತಕ್ಕೀಡಾದ ಬಸ್ ಮಕ್ಕಳನ್ನು ಹೊತ್ತು ಇಂದು ಬೆಳಿಗ್ಗೆ 8.30 ರ ಸುಮಾರಿಗೆ ಡಿಎವಿ ಪಬ್ಲಿಕ್ ಶಾಲೆಯತ್ತ ತೆರಳುತ್ತಿತ್ತು. ಈ ವೇಳೆ ಅಪಘಾತ ಸಂಭವಿಸಿದೆ.
ಮೃತರನ್ನು ಸಮೀರ್ (5), ಆದರ್ಶ್ (7), ಕಾರ್ತಿಕ್ (14), ಅಭಿಷೇಕ್, ಸಂಜನಾ, ನೈತಿಕ್ ಚೌಹಾಣ್ ಹಾಗೂ ಚಾಲಕ ರಾಮ್ ಸ್ವರೂಪ್ ಎಂದು ಗುರ್ತಿಸಲಾಗಿದೆ. ಘಟನೆಯಲ್ಲಿ 12 ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಲೀ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿತೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.