ಪೂಂಚ್: ಜಮ್ಮು ಮತ್ತು ಕಾಶ್ಮೀರ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಕದನ ವಿರಾಮ ಉಲ್ಲಂಘಿಸಿರುವ ಪಾಕಿಸ್ತಾನ, ಭಾರತೀಯ ಸೇನೆಯನ್ನು ಗುರಿಯಾಗಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದೆ ಎಂದು ಶನಿವಾರ ತಿಳಿದುಬಂದಿದೆ.
ಕಳೆದ 48 ಗಂಟೆಗಳಿಂದ ಪದೇ ಪದೇ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡುತ್ತಿದ್ದು, ಪಾಕಿಸ್ತಾನದ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡುತ್ತಿದೆ. ಗುಂಡಿನ ಚಕಮಕಿಯಲ್ಲಿ ಈ ವರೆಗೂ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ ಎಂದು ವರದಿಗಳು ತಿಳಿಸಿವೆ.
ಡಿ.21 ರಂದೂ ಕೂಡ ಪಾಕಿಸ್ತಾನ ಸೇನೆಯನ್ನು ಗುರಿಯಾಗಿರಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿತ್ತು. ಕುಪ್ವಾಲ ಜಿಲ್ಲೆಯ ಕೆರಣ್ ಸೆಕ್ಟರ್ ಬಳಿ ಪಾಕಿಸ್ತಾನ ನಡೆಸಿದ್ದ ಗುಂಡಿನ ದಾಳಿಗೆ ಇಬ್ಬರು ಭಾರತೀಯ ಯೋಧರು ಹುತಾತ್ಮರಾಗಿದ್ದರು.