ಸಂಗ್ರಹ ಚಿತ್ರ 
ದೇಶ

ಶಬರಿಮಲೆಗೆ ಮಹಿಳೆಯರ ಪ್ರವೇಶ ವಿಚಾರದ ಕುರಿತು ವಿಶ್ವಸಂಸ್ಥೆ ಹೇಳಿದ್ದೇನು?

ವಿಶ್ವ ವಿಖ್ಯಾತ ಪವಿತ್ರ ಯಾತ್ರಾತಾಣ ಶಬರಿಮಲೆಗೆ ಮಹಿಳೆಯರ ಪ್ರವೇಶ ವಿಚಾರಕ್ಕೆ ಸಂಬಂಧಿಸಿದಂತೆ ಕೇರಳದಲ್ಲಿ ವ್ಯಾಪಕ ಹಿಂಸಾಚಾರ ಭುಗಿಲೆದ್ದಿರುವಂತೆಯೇ ಈ ವಿಚಾರಕ್ಕೆ ಸಂಬಂಧಿಸಿದಂತೆ ವಿಶ್ವಸಂಸ್ಥೆ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದೆ.

ವಿಶ್ವಸಂಸ್ಥೆ: ವಿಶ್ವ ವಿಖ್ಯಾತ ಪವಿತ್ರ ಯಾತ್ರಾತಾಣ ಶಬರಿಮಲೆಗೆ ಮಹಿಳೆಯರ ಪ್ರವೇಶ ವಿಚಾರಕ್ಕೆ ಸಂಬಂಧಿಸಿದಂತೆ ಕೇರಳದಲ್ಲಿ ವ್ಯಾಪಕ ಹಿಂಸಾಚಾರ ಭುಗಿಲೆದ್ದಿರುವಂತೆಯೇ ಈ ವಿಚಾರಕ್ಕೆ ಸಂಬಂಧಿಸಿದಂತೆ ವಿಶ್ವಸಂಸ್ಥೆ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ವಿಶ್ವಸಂಸ್ಥೆ ಮುಖ್ಯಸ್ಥ ಆಂಟೋನಿಯೊ ಗುಟರ್ರೆಸ್ ಅವರು, ಶಬರಿಮಲೆ ವಿಚಾರದ ಕುರಿತು ಈಗಾಗಲೇ ಭಾರತದ ಸರ್ವೋಚ್ಛ ನ್ಯಾಯಾಲಯ ತನ್ನ ತೀರ್ಪು ನೀಡಿದೆ. ಈ ಬಗ್ಗೆ ನಾವು ಮಾತನಾಡುವುದು ಸರಿಯಲ್ಲ. ಆದರೆ ಪ್ರತೀಯೊಬ್ಬರೂ ಕಾನೂನಿನ ನಿಯಮಗಳನ್ನು ಪಾಲಿಸಬೇಕು ಎಂದು ಹೇಳುವ ಮೂಲಕ ಶಬರಿಮಲೆಗೆ ಮಹಿಳೆಯ ಪ್ರವೇಶಕ್ಕೆ ಅನುವು ಮಾಡಿಕೊಟ್ಟ ಸುಪ್ರೀಂ ಕೋರ್ಟ್ ತೀರ್ಪಿಗೆ ಬೆಂಬಲ ಸೂಚಿಸಿದ್ದಾರೆ.
'ಈಗಾಗಲೇ ಶಬರಿಮಲೆ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ತನ್ನ ತೀರ್ಪು ನೀಡಿದೆ. ಹೀಗಾಗಿ ನಾವು ಈ ಬಗ್ಗೆ ಹೆಚ್ಚು ಮಾತನಾಡಲು ಇಚ್ಛಿಸುವುದಿಲ್ಲ. ಆದರೆ ಯಾವುದೇ ರಾಜಕೀಯ ಪಕ್ಷವಿರಲಿ, ಅಥವಾ ನಾಗರೀಕರಿರಲಿ ದೇಶದ ಕಾನೂನನ್ನು ಗೌರವಿಸಬೇಕು. ವಿಶ್ವಸಂಸ್ಥೆ ಕೂಡ ಸಮಾನತೆಯನ್ನು ತನ್ನ ಮೂಲ ಅಜೆಂಡಾವಾಗಿ ಹೊಂದಿದೆ ಎಂದು ಹೇಳಿದ್ದಾರೆ.
ಇದೇ ವಿಚಾರವಾಗಿ ಮಾತನಾಡಿರುವ ವಿಶ್ವಸಂಸ್ಥೆ ಮುಖ್ಯಸ್ಥರ ವಕ್ತರಾ ಫರ್ಹಾನ್ ಹಕ್ ಅವರು, ಶಬರಿಮಲೆ ವಿವಾದದಿಂದಾಗಿ ಕೇರಳದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಆದರೆ  ಯಾರೇ ಆದರೂ ಕಾನೂನನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಅಂತೆಯೇ ಶಬರಿಮಲೆಗೆ ಮಹಿಳೆಯರ ಪ್ರವೇಶ ನಿಷೇಧ ಮಾಡುವುದು ಮಾನವ ಹಕ್ಕುಗಳ ಉಲ್ಲಂಘನೆಯಾಗುವುದಿಲ್ಲವೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಈ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಭಾರತದ ಸರ್ವೋಚ್ಛ ನ್ಯಾಯಾಲಯವೇ ತೀರ್ಪು ನೀಡಿದೆ. ಹೀಗಿರುವಾಗಿ ಈ ಬಗ್ಗೆ ನಮ್ಮ ಪ್ರತಿಕ್ರಿಯೆ ಅನಾವಶ್ಯಕ ಎಂದು ಹೇಳಿದರು.
ಅಂತೆಯೇ ಇಸ್ಲಾಂ ಮತ್ತು ಕ್ಯಾಥೋಲಿಸಂ ನಲ್ಲೂ ಇರುವ ಆಚರಣೆಗಳ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಶಬರಿಮಲೆ ವಿಚಾರ ಮತ್ತು ಇದು ಬೇರೆ ಬೇರೆಯಾಗಿದ್ದು, ಯಾವುದೇ ವಿಚಾರವಾದರೂ ವಿಶ್ವಸಂಸ್ಥೆ ನಿಲುವು ಒಂದೇ ಅದು ಸಮಾನತೆ ಮತ್ತು ಮಾನವೀಯತೆ. ಯಾರೇ ಆದರೂ ಕಾನೂನಿನ ನಿಯಮ ಪಾಲಿಸಬೇಕು ಎಂದು ಫರ್ಹಾನ್ ಹಕ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Jantar Mantar ಬಳಿ ಭಾರೀ ಹೈಡ್ರಾಮಾ: ಬ್ಯಾರಿಕೇಡ್ ದಾಟಿದ CJP ನಾಯಕರು ಪೊಲೀಸ್ ವಶಕ್ಕೆ; ಪ್ರತಿರೋಧ ನಿಷೇಧ ಸಾಧ್ಯವಿಲ್ಲ-ಕೇಂದ್ರದ ವಿರುದ್ಧ ದೀಪ್ಕೆ ಆಕ್ರೋಶ

‘ಪ್ರತಿಭಟನೆ ನಮ್ಮ ಹಕ್ಕು, ಬಂಧನಗಳಿಂದ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ’: ದೇಶಾದ್ಯಂತ ಚಳವಳಿ ವಿಸ್ತರಿಸಲು Cockroach Janta Party ಪಣ (INTERVIEW)

ನೀವೂ ಪ್ರಧಾನಿ ಮೋದಿಯಂತೆಯೇ ದಬ್ಬಾಳಿಕೆದಾರರು, ಧೈರ್ಯವಿದ್ದರೆ 'ನಿಮ್ಮ ಆ ಚಿಕ್ಕ ಶಾಲು' ಧರಿಸಿ ಹೊರ ಬಂದು ನೋಡಿ: BJP-RSSಗೆ ರಾಹುಲ್ ಗಾಂಧಿ ಸವಾಲು

SC/ST ಮೀಸಲಾತಿ ಹೆಚ್ಚಳ ರದ್ದು: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಬಿಗ್ ಶಾಕ್, ಭಾರೀ ಹಿನ್ನಡೆ..!

ಕಾವೇರಿ ಕಗ್ಗಂಟು: "ಕುಡಿಯಲು ನಮಗೇ ನೀರಿಲ್ಲ, ತಮಿಳುನಾಡಿಗೆ ಕೊಡೋದು ಹೇಗೆ..?" ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ ವಾದ..!