ಸಾಂದರ್ಭಿಕ ಚಿತ್ರ 
ದೇಶ

ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿ, ಆತ್ಮಹತ್ಯೆಗೆ ಶರಣಾದ ಸಿಆರ್ ಪಿಎಫ್ ಯೋಧ

ಕಣಿವೆ ರಾಜ್ಯ ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿನ ಸೇನಾ ಶಿಬಿರದ ಒಳಗಡೆ ಸಿಆರ್ ಪಿಎಫ್ ಯೋಧರೊಬ್ಬರು ಇಬ್ಬರು ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿ ಬಳಿಕ ತನ್ನ ಸರ್ವಿಸ್ ರೈಪಲ್ ನಿಂದ ಗುಂಡು ಹೊಡೆದುಕೊಂಡು ಮೃತಪಟ್ಟಿದ್ದಾರೆ.

ಶ್ರೀನಗರ:  ಕಣಿವೆ ರಾಜ್ಯ ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿನ ಸೇನಾ ಶಿಬಿರದ ಒಳಗಡೆ ಸಿಆರ್ ಪಿಎಫ್ ಯೋಧರೊಬ್ಬರು ಇಬ್ಬರು ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿ ಬಳಿಕ ತನ್ನ ಸರ್ವಿಸ್ ರೈಪಲ್ ನಿಂದ ಗುಂಡು ಹೊಡೆದುಕೊಂಡು ಮೃತಪಟ್ಟಿದ್ದಾರೆ.

ಶನಿವಾರ ತಡರಾತ್ರಿ ಈ ದುರ್ಘಟನೆ ನಡೆದಿದ್ದು,  ಮುಕೇಶ್ ಬಾವುಕ್ ಎಂಬ ಯೋಧ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು  ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಪಂತಾ ಚೌಕ್ ಸೇನಾ ಶಿಬಿರದಲ್ಲಿದ್ದ ಸಿಆರ್ ಪಿಎಫ್ ನ 29  ಬೆಟಲಿಯಾನ್ ನ ಮುಕೇಶ್ ಬಾವುಕ್ ಕೆಲ ವಿಚಾರಗಳಿಂದಾಗಿ  ತನ್ನಿಬ್ಬರು ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿದ್ದಾರೆ. ಬಳಿಕ ತಮ್ಮ ಸರ್ವಿಸ್ ರೈಪಲ್ ನಿಂದ ಗುಂಡು ಹಾರಿಸಿಕೊಂಡು ಮೃತಪಟ್ಟಿದ್ದಾರೆ ಎಂದು ಅವರು ಹೇಳಿದ್ದಾರೆ.

ಗುಂಡಿನ ದಾಳಿಯಿಂದಾಗಿ ಗಾಯಗೊಂಡಿದ್ದ ಇಬ್ಬರು ಯೋಧರ ಆರೋಗ್ಯ ಪರಿಸ್ಥಿತಿ ಸ್ಥಿರವಾಗಿದೆ. ಈ ಘಟನೆ ಕಾರಣ ಏನು ಎಂಬುದನ್ನು ಪತ್ತೆ ಹಚ್ಚುವ ಸಲುವಾಗಿ ಇಲಾಖಾ ತನಿಖೆಗೆ ಆದೇಶಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು

CEC ಜ್ಞಾನೇಶ್ ಕುಮಾರ್ ವಿರುದ್ಧ ಸಿಜೆಪಿ ಪ್ರತಿಭಟನೆ ವೇಳೆ 2 ಪೊಲೀಸರಿಗೆ ಕಲ್ಲೇಟು!