ಸಂಗ್ರಹ ಚಿತ್ರ 
ದೇಶ

ಉತ್ತರಪ್ರದೇಶ: ಮಹಿಳೆ ಅಪಹರಿಸಿ ಸಾಮೂಹಿಕ ಅತ್ಯಾಚಾರ, ಕಾಮುಕರ ಬಂಧನ

ಮಹಿಳೆಯೊಬ್ಬರನ್ನು ಅಪಹರಿಸಿದ್ದ ಕಾಮುಕರು ನಂತರ ಆಕೆ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ್ದು. ಘಟನೆಯ ವಿಡಿಯೋ ಮಾಡಿರುವ ಘಟನೆ ಉತ್ತರಪ್ರದೇಶದಲ್ಲಿ ಮುಜಾಫರ್ನಗರದಲ್ಲಿ ನಡೆದಿದೆ...

ಮುಜಾಫರ್ನಗರ: ಮಹಿಳೆಯೊಬ್ಬರನ್ನು ಅಪಹರಿಸಿದ್ದ ಕಾಮುಕರು ನಂತರ ಆಕೆ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ್ದು. ಘಟನೆಯ ವಿಡಿಯೋ ಮಾಡಿರುವ ಘಟನೆ ಉತ್ತರಪ್ರದೇಶದಲ್ಲಿ ಮುಜಾಫರ್ನಗರದಲ್ಲಿ ನಡೆದಿದೆ. 
ಕಳೆದ ತಿಂಗಳು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. 23 ವರ್ಷದ ಮಹಿಳೆಯನ್ನು ಅಪಹರಣ ಮಾಡಿರುವ ಇಬ್ಬರು ಕಾಮುಕರು ಆಕೆಯ ಮೇಲೆ ಅತ್ಯಾಚಾರ ಮಾಡಿದ್ದಾರೆ. ನಂತರ ಘಟನೆಯ ವಿಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. 
ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಕ್ರಮ ಕೈಗೊಂಡ ಪೊಲೀಸರು ಆರೋಪಿಗಳನ್ನು ಬಂಧನಕ್ಕೊಳಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ. 
ಅಕಿಬ್ ಹಾಗೂ ಸಾಜಿದ್ ಎಂಬ ಇಬ್ಬರು ವ್ಯಕ್ತಿಗಳು ತನ್ನ ಸಹೋದರಿಯನ್ನು ಅಪಹರಣ ಮಾಡಿದ್ದು, ಆಕೆಯ ಮೇಲೆ ಅತ್ಯಾಚಾರ ಮಾಡಿದ್ದಾರೆಂದು ಯುವತಿಯ ಸಹೋದರ ದೂರು ನೀಡಿದ್ದರು. ಸಂತ್ರಸ್ತ ಯುವತಿಯನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದ್ದು, ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ. 
ಘಟನೆಯ ವಿಡಿಯೋ ಮಾಡಿಕೊಂಡಿದ್ದ ಆರೋಪಿಗಳು ಈ ವಿಚಾರವನ್ನು ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾರೆ. ವಿಡಿಯೋ ವೈರಲ್ ಆದ ಬಳಿಕವೇ ಯುವತಿಯ ಕುಟುಂಬಸ್ಥರಿಗೆ ಈ ಬಗ್ಗೆ ಮಾಹಿತಿ ತಿಳಿದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ನಾವಿಕರ ಸುರಕ್ಷತೆ ಮುಖ್ಯ; ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ಸ್ವೀಕಾರಾರ್ಹವಲ್ಲ: ಇರಾನ್‌ಗೆ ಅಜಿತ್ ದೋವಲ್

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!