ದೇಶ

ಭಾರತ್ ಬಂದ್ ಗೆ ಕರೆ ನೀಡಿರುವ ಕಾರ್ಮಿಕ ಸಂಘಟನೆಗಳ ಬೇಡಿಕೆಗಳೇನು ಗೊತ್ತೇ?

Srinivas Rao BV
ಬೆಂಗಳೂರು: ಮೋಟಾರು ವಾಹನ ತಿದ್ದುಪಡಿ ಮಸೂದೆ, ಕಾರ್ಮಿಕ ಕಾನೂನು ತಿದ್ದುಪಡಿ ಸೇರಿದಂತೆ ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಕಾರ್ಮಿಕ ಸಂಘಟನೆಗಳು ಮಂಗಳವಾರದಿಂದ ಎರಡು ದಿನ ಭಾರತ್ ಬಂದ್ ಗೆ ಕರೆ ನೀಡಿವೆ. 
ಕೇಂದ್ರ ಸರ್ಕಾರದ ಪ್ರಸ್ತಾವಿತ ಕಾನೂನು ತಿದ್ದುಪಡಿಯನ್ನು ವಿರೋಧಿಸುವುದರ ಜೊತೆಗೆ ಹಲವು ಬೇಡಿಕೆಗಳನ್ನೂ ಮುಂದಿಟ್ಟಿವೆ.  2018 ರ ಸೆಪ್ಟೆಂಬರ್ ನಲ್ಲಿ ನಡೆದಿದ್ದ ಕಾರ್ಮಿಕ ಸಂಘಟನೆಗಳ ಸಮಾವೇಶದಲ್ಲಿ  ತಮ್ಮ 12 ಬೇಡಿಕೆಗಳನ್ನೂ ಕೇಂದ್ರ ಸರ್ಕಾರ ನಿರ್ಲಕ್ಷಿಸಿದೆ ಎಂದು ಕಾರ್ಮಿಕ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದವು 
ಕಾರ್ಮಿಕ ಸಂಘಟನೆಗಳ ಬೇಡಿಕೆಗಳಲ್ಲಿನ ಅಂಶಗಳೇನು? ಕೇಂದ್ರದ ವಿರುದ್ಧ ಆಕ್ರೋಶವೇಕೆ?
  1. ಕಾರ್ಮಿಕ ಸಂಘಟನೆಗಳ ಕನಿಷ್ಟ ವೇತನ ಬೇಡಿಕೆಯ ನಿರ್ಲಕ್ಷ್ಯ 
  2. ಸಾರ್ವತ್ರಿಕ ಸಾಮಾಜಿಕ ಭದ್ರತೆ
  3. ಆರ್ಥಿಕ ಕ್ಷೇತ್ರವೂ ಸೇರಿದಂತೆ ಸಾರ್ವಜನಿಕ ಹಾಗೂ ಸರ್ಕಾರಿ ಸೆಕ್ಟರ್ ಗಳನ್ನು ಖಾಸಗೀಕರಣಗೊಳಿಸಬಾರದು 
  4. ಉದ್ಯೋಗ ಸೃಷ್ಟಿಯಲ್ಲಿ ಕೇಂದ್ರ ಸರ್ಕಾರ ನೀಡಿದ್ದ ಭರವಸೆ ಈಡೇರಿಲ್ಲ
  5. ಬೇಡಿಕೆಗಳಿಗೆ ಸಂಬಂಧಿಸಿದಂತೆ ಮಾತುಕತೆಗೆ ಮುಂದಾಗದ ಕೇಂದ್ರ ಸರ್ಕಾರ 
ಇವೆಲ್ಲದರ ಜೊತೆಗೆ ಕಾರ್ಮಿಕ ಸಂಘಟನೆಗಳು ದೇಶದಲ್ಲಿ ನಡೆಯುತ್ತಿರುವ ಕೋಮು ವಿಭಜನೆ ತಂತ್ರಗಳ ವಿರುದ್ಧದ ನಿರ್ಣಯವನ್ನೂ ಕೈಗೊಂಡಿದ್ದವು. 
SCROLL FOR NEXT