ಸಂಸತ್ತು 
ದೇಶ

ಪೌರತ್ವ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಅಂಗೀಕಾರ

ಬಾಂಗ್ಲಾದೇಶ, ಪಾಕಿಸ್ತಾನ, ಮತ್ತು ಅಪ್ಘಾನಿಸ್ತಾನದ ಮುಸ್ಲಿಯೇತರ ವಲಸಿಗರಿಗೆ ಭಾರತದ ಪೌರತ್ವ ಒದಗಿಸುವ ಪೌರತ್ವ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿಂದು ಅಂಗೀಕಾರ ಪಡೆಯಿತು.

ನವದೆಹಲಿ: ಬಾಂಗ್ಲಾದೇಶ, ಪಾಕಿಸ್ತಾನ, ಮತ್ತು ಅಪ್ಘಾನಿಸ್ತಾನದ ಮುಸ್ಲಿಯೇತರ ವಲಸಿಗರಿಗೆ  ಭಾರತದ ಪೌರತ್ವ ಒದಗಿಸುವ  ಪೌರತ್ವ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿಂದು ಅಂಗೀಕಾರ ಪಡೆಯಿತು.

ವಿವಾದಾತ್ಮಕ ಪೌರತ್ವ ತಿದ್ದುಪಡಿ ಮಸೂದೆ-2019ರ ಮಂಡಿಸಿ ಮಾತನಾಡಿದ ಗೃಹ ಸಚಿವ ರಾಜನಾಥ್ ಸಿಂಗ್ ,ಈ ಮಸೂದೆ ಸಂವಿಧಾನದಲ್ಲಿನ ವಿನಾಯಿತಿಗಳಿಗೆ ವಿರುದ್ಧವಾಗಿಲ್ಲ, ಮೂರು ನೆರೆಯ ರಾಷ್ಟ್ರಗಳಲ್ಲಿ ನೋವುಂಡ  ಅಲ್ಪಸಂಖ್ಯಾತರಿಗೆ ನೆರವು ನೀಡಲಿದೆ ಎಂದು ಹೇಳಿದರು.

ಬಾಂಗ್ಲಾದೇಶ, ಪಾಕಿಸ್ತಾನ, ಮತ್ತು ಅಪ್ಘಾನಿಸ್ತಾನದಿಂದ ವಲಸೆ ಬಂದು ಆರು ವರ್ಷಗಳಿಂದ ಭಾರತದಲ್ಲಿ ನೆಲೆಸಿರುವ  ಹಿಂದೂಗಳು, ಜೈನರು, ಕ್ರಿಶ್ಚಿಯನ್, ಸಿಖ್, ಬೌದ್ದರು ಹಾಗೂ ಪಾರ್ಸಿಯನ್ನರು ಯಾವುದೇ ದಾಖಲೆ ಹೊಂದಿದ್ದರೂ ಸಹ ಈ ಮಸೂದೆ ಭಾರತದ ಪೌರತ್ವವನ್ನು ನೀಡಲಿದೆ ಎಂದರು.

ಭಾರತ ಹೊರತುಪಡಿಸಿದರೆ ಬೇರೆಡೆಗೆ ಹೋಗಲು ಅವರಿಗೆ ಅವಕಾಶ ಇಲ್ಲ. ಭಾರತದ ಮೊದಲ ಪ್ರಧಾನಿ ಜವಹರಲಾಲ್ ನೆಹರೂ ಸೇರಿದಂತೆ ಅನೇಕ ನಾಯಕರು ನೆರೆಯ ರಾಷ್ಟ್ರಗಳ ನೊಂದ ಅಲ್ಪಸಂಖ್ಯಾತ ಜನರಿಗೆ ಆಶ್ರಯ ಒದಗಿಸುವ ಮನೋಭಾವ ಹೊಂದಿದ್ದರು ಎಂದು ರಾಜನಾಥ್ ಸಿಂಗ್ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ