ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಪ್ರತಿಪಕ್ಷಗಳ ಮೈತ್ರಿಕೂಟ, ಮಹಾಘಟಬಂಧನ್‌ಗೆ ಸೇರಿಕೊಳ್ಳಬೇಕೇ ಬೇಡವೇ ಎಂಬುದನ್ನು ನಿರ್ಧರಿಸಲು ಇನ್ನಷ್ಟು ಸಮಯ ಬೇಕು ಎಂದು ಬಿಜೆಡಿ ನಾಯಕ ಹಾಗೂ ಒಡಿಶಾ ಮುಖ್ಯಮಂತ್ರಿ ನವೀನ್ ಪಾಟ್ನಾಯಕ್ ಅವರು ಮಂಗಳವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಒಡಿಶಾ ಸಿಎಂ, ಮಹಾಘಟಬಂಧನಕ್ಕೆ ಸಂಬಂಧಿಸಿದಂತೆ ನಾವು ಸ್ವಲ್ಪ ಸಮಯ ತೆಗೆದುಕೊಳ್ಳುತ್ತೇವೆ ಮತ್ತು ಆ ಕುರಿತು ಯೋಚಿಸುತ್ತೇವೆ ಎಂದರು.
ಭತ್ತಕ್ಕೆ ಬೆಂಬಲ ಬೆಲೆ ಘೋಷಿಸಬೇಕು ಎಂದು ಒತ್ತಾಯಿಸಿ ಬಿಜೆಡಿ ನೇತೃತ್ವದಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯಲ್ಲಿ ಭಾಗವಹಿಸುವುದಕ್ಕಾಗಿ ಪಟ್ನಾಯಕ್ ಅವರು ದೆಹಲಿ ಆಗಮಿಸಿದ್ದಾರೆ.
ರೈತರ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಪಟ್ನಾಯಕ್, ಮೋದಿ ಸರ್ಕಾರ 2014ರ ಚುನಾವಣೆ ವೇಳೆ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು.
ಬಿಜೆಪಿಯನ್ನು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸೋಲಿಸಿ ಅಧಿಕಾರದಿಂದ ದೂರವಿಡಲು ಎಲ್ಲ ರಾಜ್ಯಗಳ ಪ್ರಾದೇಶಿಕ ಪಕ್ಷಗಳು ಸೇರಿದಂತೆ ಕಾಂಗ್ರೆಸ್ ನೇತೃತ್ವದ ಮಹಾಘಟಬಂಧನ್ ಮಹಾಮೈತ್ರಿಯನ್ನು ಮಾಡಿಕೊಂಡಿದ್ದು, ಬಿಜೆಪಿ ವಿರುದ್ಧ ಅಖಾಡಕ್ಕೆ ಧುಮುಕಲು ಬಿಜೆಡಿ ಸಹ ವೇದಿಕೆ ಸಿದ್ಧಮಾಡಿಕೊಳ್ಳುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics