ರಾಹುಲ್ ಗಾಂಧಿ 
ದೇಶ

ರಾಫೆಲ್ ತನಿಖೆಯಿಂದ ಮೋದಿ ಬಚಾವ್ ಮಾಡಲು ಯಾರಿಗೂ ಸಾಧ್ಯವಿಲ್ಲ: ರಾಹುಲ್ ಗಾಂಧಿ

ರಾಫೆಲ್ ಯುದ್ದ ವಿಮಾನ ಖರೀದಿ ಒಪ್ಪಂದ ತನಿಖೆಯಿಂದ ಪ್ರಧಾನಿ ಮೋದಿಯನ್ನು ಯಾರಿಂದಲೂ ಬಚಾವ್ ಮಾಡಲು ಸಾಧ್ಯವಿಲ್ಲ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ನವದೆಹಲಿ: 30 ಸಾವಿರ ಕೋಟಿ ರೂಪಾಯಿ ಸಾರ್ವಜನಿಕರ ಹಣವನ್ನು ಸ್ನೇಹಿತ ಅನಿಲ್ ಅಂಬಾನಿಗೆ ನೀಡಿರುವುದು ಇಡೀ ದೇಶಕ್ಕೆ ಗೊತ್ತಿದ್ದು, ರಾಫೆಲ್ ಯುದ್ದ ವಿಮಾನ ಖರೀದಿ ಒಪ್ಪಂದ ತನಿಖೆಯಿಂದ ಪ್ರಧಾನಿ ಮೋದಿಯನ್ನು ಯಾರಿಂದಲೂ ಬಚಾವ್ ಮಾಡಲು ಸಾಧ್ಯವಿಲ್ಲ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ಸಿಬಿಐ ನಿರ್ದೇಶಕರಾಗಿ ಅಲೋಕ್ ವರ್ಮಾ ಮುಂದುವರೆಯಲು ಸುಪ್ರೀಂಕೋರ್ಟ್ ನೀಡಿರುವ  ಆದೇಶ ಕುರಿತಂತೆ ಸಂಸತ್ ಹೊರಗಡೆ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ.  ರಾಫೆಲ್ ಯುದ್ದ ಒಪ್ಪಂದ ಕುರಿತಂತೆ ತನಿಖೆ ಆರಂಭಿಸಿದ್ದರಿಂದ ಅಲೋಕ್ ವರ್ಮಾ ಅವರನ್ನು ರಜೆ ಮೇಲೆ ಕಳುಹಿಸಲಾಗಿತ್ತು. ಈ ಒಪ್ಪಂದದ ತನಿಖೆಯಿಂದ ಪ್ರಧಾನಿ ಮೋದಿ ಹಾಗೂ ಸರ್ಕಾರ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದರು.

ರಾಫೆಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಸಂಬಂಧ ತನಿಖೆ ಆರಂಭಿಸಿದ್ದ ಹಿನ್ನೆಲೆಯಲ್ಲಿ ರಾತ್ರೋರಾತ್ರಿ ಸಿಬಿಐ ನಿರ್ದೇಶಕರನ್ನು ವಜಾಗೊಳಿಸಲಾಗಿತ್ತು. ಅಲೋಕ್ ವರ್ಮಾ ಅವರೇ ಸಿಬಿಐ ನಿರ್ದೇಶಕರಾಗಿ ಮುಂದುವರೆಯಲು ಸುಪ್ರೀಂಕೋರ್ಟ್ ಅವಕಾಶ ನೀಡಿರುವುದರಿಂದ ನಮ್ಮಗೆ ಸ್ವಲ್ಪ ನೆಮ್ಮದಿ ಸಿಕ್ಕಂತಾಗಿದೆ. ಮುಂದೆ ಏನಾಗುತ್ತದೆ ಎಂಬುದನ್ನು ಕಾಯ್ದು ನೋಡಿ ಎಂದು ತಿಳಿಸಿದರು.

ರಾಫೆಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಸಂಬಂಧದ ಚರ್ಚೆಯಿಂದ ಮೋದಿ ಓಡಿಹೋಗಬಹುದು. ಆದರೆ, ಅವರು ಸುಲಭವಾಗಿ ತನಿಖೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ, ಜನತಾ ನ್ಯಾಯಾಲಯದ ಎದುರು ಈ ವಿವಾದ ಸಂಬಂಧ ನಮ್ಮೊಂದಿಗೆ ಅವರು ಚರ್ಚೆ ನಡೆಸಬೇಕಾಗಿದೆ. ರಾಫೆಲ್ ಹಗರಣ ನಡೆದಿರುವುದು ಸತ್ಯವಾಗಿದ್ದು, ಸತ್ಯದಿಂದ ಯಾರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಅಮೆರಿಕ ಸೇನೆಯ ಮಾಜಿ ಮೇಜರ್‌ಗೆ ಶೂಟ್ ಮಾಡುವ ಮೂಲಕ ಮರಣದಂಡನೆ ಶಿಕ್ಷೆ: 65 ವರ್ಷಗಳಲ್ಲಿ ಇದೇ ಮೊದಲು!

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ