ಸಂಗ್ರಹ ಚಿತ್ರ 
ದೇಶ

ಕಾಡಾನೆ ದಾಳಿ: ಶಬರಿಮಲೆ ಅಯ್ಯಪ್ಪಸ್ವಾಮಿ ಭಕ್ತ ಸಾವು

ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ ಪಡೆಯುವ ಸಲುವಾಗಿ ತೆರಳಿದ್ದ ಭಕ್ತನೊಬ್ಬ ಕಾಡನೆ ದಾಳಿಗೆ ಬಲಿಯಾಗಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ...

ಶಬರಿಮಲೆ: ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ ಪಡೆಯುವ ಸಲುವಾಗಿ ತೆರಳಿದ್ದ ಭಕ್ತನೊಬ್ಬ ಕಾಡನೆ ದಾಳಿಗೆ ಬಲಿಯಾಗಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ. 
ಪರಶಿವಂ (35) ಮೃತ ವ್ಯಕ್ತಿಯಾಗಿದ್ದಾರೆ. ಅಯ್ಯಪ್ಪ ಸ್ವಾಮಿ ದರ್ಶನ ಪಡೆಯುವ ಸಲುವಾಗಿ ಅರಣ್ಯ ಪ್ರದೇಶದಲ್ಲಿ ಕಾಲು ದಾರಿಯಲ್ಲಿ ಪುತ್ರನೊಂದಿಗೆ ಪರಶಿವಂ ಅವರು ತೆರಳಿದ್ದರು. ಕರಿಯಿಲಂತೊಡು ಮತ್ತು ಕರಿಮಲ ಮಾರ್ಗ ಮಧ್ಯೆ ಆನೆಯೊಂದು ಅಂಗಡಿ ಮೇಲೆ ದಾಳಿ ನಡೆಸುತ್ತಿದ್ದು. ಆನೆ ದಾಳಿ ನಡೆಸುತ್ತಿರುವುದನ್ನು ಕಂಡ ಪರಶಿವಂ ಅವರು ಭಯದಿಂದ ಸ್ಥಳದಲ್ಲಿದ್ದ ಅಂಗಡಿಯತ್ತ ಓಡಿ ಹೋಗಲು ಯತ್ನಿಸಿದ್ದಾರೆ. ಆದರೆ, ಅದು ಸಾಧ್ಯವಾಗಿಲ್ಲ. 
ಈ ವೇಳೆ ಆನೆ ಪರಶಿವಂ ಅವರ ಮೇಲೆ ದಾಳಿ ಮಾಡಿದೆ. ಸುದ್ದಿ ತಿಳಿಯುತ್ತಿದ್ದಂತೆಯೇ ಅರಣ್ಯಾಧಿಕಾರಿಗಳು ಹಾಗೂ ಅಯ್ಯಪ್ಪ ಸೇವಾ ಸಂಘದ ಕಾರ್ಯಕರ್ತರು ಸ್ಥಳಕ್ಕೆ ಬಂದಿದ್ದಾರೆ. ಬಳಿಕ ಬೆಂಕಿ ಹಚ್ಚಿ ಆನೆಯನ್ನು ಎದುರಿಸಿ ಸ್ಥಳದಿಂದ ಹೋಗುವಂತೆ ಮಾಡಿದ್ದಾರೆ. ಆದರೆ, ಅಷ್ಟರಲ್ಲಾಗಲೇ ಪರಶಿವಂ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರಾದರೂ ಅಷ್ಟರಲ್ಲಾಗಲೇ ಪರಶಿವಂ ಅವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಪರಶಿವಂ ಅವರ ಪುತ್ರ ಪ್ರಾಣಾಪಾಯದಿಂದ ಪಾರಾಗಿದ್ದಾರೆ. 
ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿರುವ ಅರಣ್ಯಾಧಿಕಾರಿ ಅಜೀಶ್ ಅವರು, ಮೃತನ ಕುಟುಂಬಕ್ಕೆ ರೂ.10 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್