ಸಾಂದರ್ಭಿಕ ಚಿತ್ರ 
ದೇಶ

ಬುಲಂದ್ ಶಹರ್ ಹಿಂಸಾಚಾರ: ಪ್ರಮುಖ ಆರೋಪಿ ಬಿಜೆಪಿ ಯುವ ಮೋರ್ಚಾ ಮುಖಂಡ ಅರೆಸ್ಟ್

: ಬುಲಂದ್ ಶಹರ್ ನ ಸಿಯಾನಾ ಹಿಂಸಾಚಾರ ಪ್ರಕರಣದ ಪ್ರಧಾನ ಆರೋಪಿ ಬಿಜೆಪಿ ಯುವ ಮೋರ್ಚಾ ನಾಯಕ ಶಿಖರ್ ಅಗರ್ ವಾಲ್ ಅವರನ್ನು ಪೊಲೀಸರು ಹರ್ ಪುರ್ ...

ಲಕ್ನೋ: ಬುಲಂದ್ ಶಹರ್ ನ ಸಿಯಾನಾ ಹಿಂಸಾಚಾರ ಪ್ರಕರಣದ ಪ್ರಧಾನ ಆರೋಪಿ ಬಿಜೆಪಿ ಯುವ ಮೋರ್ಚಾ ನಾಯಕ ಶಿಖರ್ ಅಗರ್ ವಾಲ್ ಅವರನ್ನು ಪೊಲೀಸರು ಹರ್ ಪುರ್ ನಲ್ಲಿ ಬಂಧಿಸಿದ್ದಾರೆ.
ಬುಲಂದ್ ಶಹರ್ ಹಿಂಸಾಚಾರ ಘಟನೆಯಲ್ಲಿ ಪೊಲೀಸ್ ಅಧಿಕಾರಿ ಸುಬೋಧ್ ಸಿಂಗ್ ಅವರ ಹತ್ಯೆಯ ಪ್ರಮುಖ ಆರೋಪಿಗಳಲ್ಲಿ ಶಿಖರ್ ಪ್ರಮುಖನಾಗಿದ್ದಾನೆ. 
ಗೋಹತ್ಯೆಗೆ ಸಂಬಂಧಿಸಿದಂತೆ ಬುಲಂದ್ ಶಹರ್ ನಲ್ಲಿ ಕಳೆದ ವರ್ಷದ ಡಿಸೆಂಬರ್ 3ರಂದು ನಡೆದಿದ್ದ ಹಿಂಸಾಚಾರದಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಸುಬೋಧ್ ಸಿಂಗ್ ಅವರನ್ನು ಕೊಲ್ಲಲಾಗಿತ್ತು, ಇದಕ್ಕೆ ಶಿಖರ್ ಅಗರ್ ವಾಲ್ ಕುಮ್ಮಕ್ಕು ನೀಡಿದ್ದ ಎನ್ನಲಾಗಿದೆ,
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಹರೂನ್ ಮತ್ತು ಪ್ರಶಾಂತ್ ನಾಥ್ ಎಂಬುವರನ್ನು ಬಂಧಿಸಲಾಗಿತ್ತು,ಗಲಭೆಯನ್ನು ನಿಯಂತ್ರಣಕ್ಕೆ ತರುವಲ್ಲಿ ಮುಂದಾದ ಸುಬೋಧ್ ಅವರಿಗೆ ಕಲ್ಲು ತೂರಾಟ  ನಡೆಸಲಾಗಿತ್ತು, ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಸಂದರ್ಭದಲ್ಲಿ ಅವರನ್ನು ಹಿಂಬಾಲಿಸಿದ ಗಲಭೆಕೋರರು ಅವರಿಗೆ ಶೂಟ್ ಮಾಡಿದ್ದರು. 
ಕಳೆದವಾರ ಪ್ರಕರಣದ ಪ್ರಮುಕ ಆರೋಪಿ  ಯೋಗೇಶ್ ರಾಜ್ ಎಂಬಾತನನ್ನು ಬಂಧಿಸಲಾಗಿತ್ತು, ದೆಹಲಿಯಲ್ಲಿ ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದ, ವಿಚಾರಣೆ ವೇಳೆ ಪೊಲೀಸ್ ಅಧಿಕಾರಿಗೆ ಗುಂಜು ಹಾರಿಸಿದ್ದು ತಾನೇ ಎಂದು ತಪ್ಪೊಪ್ಪಿಕೊಂಡಿದ್ದ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT