ದೇಶ

ಹಿಂದಿ ಕಲಿಕೆ ಕಡ್ಜಾಯ ಮಾಡುವ ಉದ್ದೇಶವಿಲ್ಲ: ಮಾಧ್ಯಮಗಳ ವರದಿಗೆ ಪ್ರಕಾಶ್ ಜಾವ್ಡೇಕರ್ ಸ್ಪಷ್ಟನೆ

Shilpa D
ನವದೆಹಲಿ: ರಾಷ್ಟ್ರಾದ್ಯಂತ 8ನೇ ತರಗತಿ ವರೆಗೆ ಹಿಂದಿ ಕಲಿಕೆಯನ್ನು ಕಡ್ಡಾಯಗೊಳಿಸುವ ಪ್ರಸ್ತಾಪದ   ಮಾಧ್ಯಮಗಳಲ್ಲಿ ವರದಿಯಾದ ಬೆನ್ನಲ್ಲೇ ಕೇಂದ್ರ ಸಚಿವ ಪ್ರಕಾಶ್‌ ಜಾವಡೇಕರ್‌ ಸ್ಪಷ್ಟನೆ ನೀಡಿದ್ದಾರೆ.
ಕೆ ಕಸ್ತೂರಿರಂಗನ್‌ ಸಮಿತಿ ಸಿದ್ಧಪಡಿಸಿದ ಹೊಸ ಶಿಕ್ಷಣ ನೀತಿ (ಎನ್‌ಇಪಿ) ಕರಡಿನಲ್ಲಿ ಹಿಂದಿ ಕಲಿಕೆ ಬಗ್ಗೆ ಪ್ರಸ್ತಾಪಿಸಿದ್ದಾರೆ ಎಂಬ ವರದಿ ಕೆಲವು ರಾಷ್ಟ್ರೀಯ ವಾಹಿನಿಗಳಲ್ಲಿ ಸುದ್ದಿಯಾಗಿತ್ತು. ಇದರ ಬೆನ್ನಲ್ಲೇ ಟ್ವೀಟ್‌ ಮಾಡಿರುವ ಪ್ರಕಾಶ್‌ ಜಾವಡೇಕರ್‌ ಸ್ಪಷ್ಟನೆ ನೀಡಿದ್ದಾರೆ. 
ಹೊಸ ಶಿಕ್ಷಣ ನೀತಿಯ ಕರಡಿನಲ್ಲಿ ಯಾವುದೇ ಭಾಷೆಯ ಕಲಿಕೆಯನ್ನು ಕಡ್ಡಾಯ ಮಾಡುವ ಬಗ್ಗೆ ಪ್ರಸ್ತಾಪ ಇಲ್ಲ. ಸುದ್ದಿವಾಹಿನಿಗಳು ತಪ್ಪಾಗಿ ಸುದ್ದಿ ಮಾಡಿವೆ ಎಂದು ಟ್ವೀಟ್‍‌ ಮಾಡಿದ್ದಾರೆ.
ಪ್ರಸ್ತುತ ಹಿಂದಿ ಮಾತನಾಡದ ರಾಜ್ಯಗಳ ಶಾಲೆಗಳಲ್ಲಿ ಹಿಂದಿ ಕಲಿಕೆ ಕಡ್ಡಾಯವಲ್ಲ. ತಮಿಳುನಾಡು, ಕರ್ನಾಟಕ, ತೆಲಂಗಾಣ, ಆಂಧ್ರ ಪ್ರದೇಶ, ಗೋವ, ಪಶ್ಚಿಮ ಬಂಗಾಳ, ಅಸ್ಸಾಂ ಮತ್ತಿತರ ರಾಜ್ಯಗಳಲ್ಲಿ ಹಿಂದಿಯನ್ನು ಕಡ್ಡಾಯವಾಗಿ ಕಲಿಸುತ್ತಿಲ್ಲ. 
SCROLL FOR NEXT