ದೇಶ

ಮೋದಿ ಏನು ವಾಜಪೇಯಿ ಅಲ್ಲ, ಬಿಜೆಪಿ ಜೊತೆ ಮೈತ್ರಿ ಪ್ರಶ್ನೆಯೇ ಇಲ್ಲ: ಎಂಕೆ ಸ್ಟಾಲಿನ್

Srinivasamurthy VN
ಚೆನ್ನೈ: ಪ್ರಧಾನಿ ಮೋದಿ ಏನು ವಾಜಪೇಯಿ ಅಲ್ಲ. ಅಂತೆಯೇ ಡಿಎಂಕೆ ಯಾವುದೇ ಕಾರಣಕ್ಕೂ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಹೇಳಿದ್ದಾರೆ.
ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿ ಅವರಿಗೂ ವಾಜಪೇಯಿ ಅವರಿಗೂ ಅಜಗಜಾಂತರ ವ್ಯತ್ಯಾಸವಿದೆ. ಅವರ ನಡುವಿನ ಹೋಲಿಕೆ ಸರಿಯಲ್ಲ. ಬಿಜೆಪಿ ನಾಯಕರು ನರೇಂದ್ರಮೋದಿ ಅವರನ್ನು ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರೊಂದಿಗೆ ಹೋಲಿಕೆ ಮಾಡುತ್ತಿರುವುದು ದುರದೃಷ್ಟಕರ ಎಂದು ಸ್ಚಾಲಿನ್ ಹೇಳಿದ್ದಾರೆ.
ಅಂತೆಯೇ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಾವು ಯಾವುದೇ ಕಾರಣಕ್ಕೂ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುದಿಲ್ಲ ಎಂದು ಸ್ಪಷ್ಟಪಡಿಸಿದರು.
ಇನ್ನು ಇತ್ತೀಚೆಗಷ್ಟೇ ತಮಿಳುನಾಡು ಬಿಜೆಪಿಯ ಬೂತ್ ಮಟ್ಟದ ಕಾರ್ಯಕರ್ತರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ್ದ ಪ್ರಧಾನಿ ಮೋದಿ, ತಮಿಳುನಾಡಿನಲ್ಲಿ ಇತರೆ ಪಕ್ಷಗಳೊಂದಿಗೆ ಮೈತ್ರಿಗೆ ಬಿಜೆಪಿ ಮುಕ್ತವಾಗಿದೆ. ಅಟಲ್ ಬಿಹಾರಿ ವಾಜಪೇಯಿ ಅವರು ಮೈತ್ರಿ ಸಂಪ್ರದಾಯದ ಮೂಲಕ ದೇಶಕ್ಕೆ ಹೊಸ ಬಗೆಯ ಮೈತ್ರಿ ಕೂಟಕ್ಕೆ ನಾಂದಿ ಹಾಡಿದ್ದರು. ಅವರು ಹಾಕಿಕೊಟ್ಟ ಹಾದಿಯಲ್ಲೇ ಬಿಜೆಪಿ ಸಾಗಲಿದೆ ಎಂದು ಹೇಳಿದ್ದರು.
SCROLL FOR NEXT