ಎ ಕೆ ಆಂಟನಿ 
ದೇಶ

ಪ್ರಧಾನಿ ಮೋದಿಯನ್ನು ಏಕಾಂಗಿಯಾಗಿ ಎದುರಿಸುವಷ್ಟು ಕಾಂಗ್ರೆಸ್ ಸಮರ್ಥವಿಲ್ಲ: ಎ ಕೆ ಆಂಟನಿ

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಏಕಾಂಗಿಯಾಗಿ ಎದುರಿಸಲು ಸಾಧ್ಯವಿಲ್ಲ ಎಂಬುದನ್ನು...

ತಿರುವನಂತಪುರ: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಏಕಾಂಗಿಯಾಗಿ ಎದುರಿಸಲು ಸಾಧ್ಯವಿಲ್ಲ ಎಂಬುದನ್ನು ಕಾಂಗ್ರೆಸ್ ಅರ್ಥ ಮಾಡಿಕೊಂಡಿದೆ ಎಂದು ತಿರುವನಂತಪುರದಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಸಭೆ ನಡೆಸುವಾಗ ಕಾಂಗ್ರೆಸ್ ನ ಹಿರಿಯ ನಾಯಕ ಮಾಜಿ ರಕ್ಷಣಾ ಸಚಿವ ಎ ಕೆ ಆಂಟನಿ ಹೇಳಿದ್ದಾರೆ. ಇದನ್ನು ಕಾಂಗ್ರೆಸ್ ಹೈಕಮಾಂಡ್  ಯಾವ ರೀತಿ ತೆಗೆದುಕೊಳ್ಳುತ್ತದೆ ಎಂಬುದು ಸದ್ಯದ ಕುತೂಹಲ.

ಕಾಂಗ್ರೆಸ್ ನಿಂದ ಮಾತ್ರ ನರೇಂದ್ರ ಮೋದಿಯವರನ್ನು ಅಧಿಕಾರದಿಂದ ಕೆಳಗಿಳಿಸಲು ಸಾಧ್ಯವಿಲ್ಲ. ಆದರೂ ಕೂಡ ಮೋದಿಯವರನ್ನು ಅಧಿಕಾರದಿಂದ ದೂರವಿಡುವ ಪ್ರಚಾರದಲ್ಲಿ ಕಾಂಗ್ರೆಸ್ ಪ್ರಮುಖ ಶಕ್ತಿಯಾಗಿದೆ. ಹೀಗಾಗಿ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ಬೇರೆ ಪಕ್ಷಗಳೊಂದಿಗೆ ಕೈಜೋಡಿಸಲು ಮುಂದಾಗಿದೆ ಎಂದು ನಿನ್ನೆ ಆಂಟನಿಯವರು ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ಹೇಳಿದ್ದರು.

ಮೋದಿಯವರ ಜೊತೆ ಹೋರಾಡಲು ರಾಹುಲ್ ಗಾಂಧಿಯವರು ಪ್ರಮುಖ ನಾಯಕರಾಗಿ ಬೆಳೆದಿದ್ದು ಇಂದು ಅವರ ಎದುರು ಧೈರ್ಯದಿಂದ ಹೋರಾಡಲು ಸಾಮರ್ಥ್ಯ ಹೊಂದಿದ್ದಾರೆ. ಹೀಗಾಗಿ ಮೋದಿಯವರಿಗೆ ರಾಹುಲ್ ಕಂಡರೆ ಭಯವಾಗುತ್ತಿದೆ ಎಂದರು.

ಮುಂದಿನ ಲೋಕಸಭೆ ಚುನಾವಣೆಯನ್ನು ಕುರುಕ್ಷೇತ್ರ ಯುದ್ಧ ಎಂದು ಬಣ್ಣಿಸಿದ ಎ ಕೆ ಆಂಟನಿ ದೇಶವನ್ನು ಕಾಪಾಡಲು ಕೋಮುವಾದಿ ಶಕ್ತಿಗಳನ್ನು ಅಧಿಕಾರದಿಂದ ದೂರವಿಡಬೇಕು ಎಂದರು.

ಚುನಾವಣೆ ಸಮೀಪಿಸುತ್ತಿರುವಾಗ ಕೊನೆ ಹಂತದಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಅಭ್ಯಾಸವನ್ನು ಕಾಂಗ್ರೆಸ್ ಬಿಡಬೇಕು. ಅಭ್ಯರ್ಥಿಗಳ ಆಯ್ಕೆ ಜಿಲ್ಲಾ ಸಮಿತಿಯಿಂದ ನಿರ್ಧಾರವಾಗಬೇಕು. ಕೆಲ ನಾಯಕರು ತೀರ್ಮಾನಿಸುವ ಬದಲು ಅಭ್ಯರ್ಥಿಗಳ ಆಯ್ಕೆಯು ಪ್ರಜಾಸತ್ತಾತ್ಮಕವಾಗಿ ನಡೆಯಬೇಕು ಎಂದು ಅಭಿಪ್ರಾಯಪಟ್ಟರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT