ದೇಶ

ಉತ್ತರ ಪ್ರದೇಶದಲ್ಲಿ ಎಸ್ಪಿ-ಬಿಎಸ್ಪಿ ಮೈತ್ರಿ ಅಮಿತ್ ಶಾ, ಮೋದಿ ನಿದ್ದೆಗೆಡಿಸಲಿದೆ: ಮಾಯಾವತಿ

Nagaraja AB
ಲಖನೌ: ಉತ್ತರ ಪ್ರದೇಶದಲ್ಲಿ ಸಮಾಜವಾದಿ ಹಾಗೂ ಬಹುಜನ ಸಮಾಜವಾದಿ ಪಕ್ಷಗಳು ಜೊತೆಯಾಗಿ ಮುಂಬರುವ ಲೋಕಸಭಾ ಚುನಾವಣೆಯನ್ನು ಎದುರಿಸಲು ನಿರ್ಧರಿಸಿವೆ.
38 ಕ್ಷೇತ್ರಗಳಲ್ಲಿ ಬಿಎಸ್ಪಿ, 38 ಕ್ಷೇತ್ರಗಳಲ್ಲಿ ಎಸ್ಪಿ ಸ್ಪರ್ಧಿಸಲು ನಿರ್ಧರಿಸಿದ್ದು, ಎರಡು ಕ್ಷೇತ್ರಗಳನ್ನು ಇತರ ಪಕ್ಷಗಳಿಗೆ ಬಿಟ್ಟುಕೊಡಲು ತೀರ್ಮಾನಿಸಲಾಗಿದೆ. ರಾಯ್ ಬರೇಲಿ ಮತ್ತು ಅಮೇಥಿ ಕ್ಷೇತ್ರಗಳನ್ನು ಪರೋಕ್ಷವಾಗಿ  ಸೋನಿಯಾಗಾಂಧಿ ಹಾಗೂ ರಾಹುಲ್ ಗಾಂಧಿ ಅವರಿಗೆ ಬಿಟ್ಟುಕೊಡಲಾಗಿದೆ.
ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಜೊತೆಗೆ ಜಂಟಿ ಸುದ್ದಿಗೋಷ್ಠಿ ನಡೆಸಿದ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ, ಮುಂಬರುವ ಲೋಕಸಭಾ ಚುನಾವಣೆಯನ್ನು ಎಸ್ಪಿ, ಬಿಎಸ್ಪಿ ಜೊತೆಯಾಗಿ ಎದುರಿಸಲಿದ್ದು, ದೇಶದಲ್ಲಿ ಹೊಸ ರಾಜಕೀಯ ಕ್ರಾಂತಿಯಾಗಲಿದೆ.ಇದು ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನಿದ್ದೆಗೆಡಿಸಲಿದೆ ಎಂದರು.
SCROLL FOR NEXT