ದೇಶ

ಶಾರದಾ ಚಿಟ್ ಫಂಡ್ ಹಗರಣ: ನಳಿನಿ ಚಿದಂಬರಂಗೆ ಮಧ್ಯಂತರ ನಿರೀಕ್ಷಣಾ ಜಾಮೀನು

Sumana Upadhyaya

ಚೆನ್ನೈ: ಶಾರದಾ ಚಿಟ್ ಫಂಡ್ ಹಗರಣದಲ್ಲಿ ಕೇಂದ್ರ ಮಾಜಿ ಸಚಿವ ಪಿ ಚಿದಂಬರಂ ಅವರ ಪತ್ನಿ ನಳಿನಿ ಚಿದಂಬರಂಗೆ ಮದ್ರಾಸ್ ಹೈಕೋರ್ಟ್ ನಾಲ್ಕು ವಾರಗಳ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿದೆ.

ಶಾರದಾ ಚಿಟ್ ಫಂಡ್ ಹಗರಣ ಕೇಸಿಗೆ ಸಂಬಂಧಪಟ್ಟಂತೆ ಸಿಬಿಐ ಸಲ್ಲಿಸಿದ್ದ ಆರೋಪಪಟ್ಟಿಯಿಂದ ಮುಕ್ತಿ ನೀಡುವಂತೆ ಕೋರಿ ನಳಿನಿ ಚಿದಂಬರಂ ಹೈಕೋರ್ಟ್ ಮೊರೆ ಹೋಗಿದ್ದರು. ಕೋಲ್ಕತ್ತಾದ ವಿಶೇಷ ನ್ಯಾಯಾಲಯದಲ್ಲಿ ಸಿಬಿಐ ಚಾರ್ಜ್ ಶೀಟ್ ಸಲ್ಲಿಸಿತ್ತು.

ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್ ನಳಿನಿ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿ ನಿಗದಿತ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಲು ಸಂಬಂಧಪಟ್ಟ ಕೋರ್ಟ್ ಗೆ ಮೊರೆ ಹೋಗುವ ಮೊದಲು ಎಗ್ಮೋರ್ ನ ಮುಖ್ಯ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ಮುಂದೆ ಮುಚ್ಚಳಿಕೆ ಬರೆದುಕೊಡಬೇಕೆಂದು ಆದೇಶ ನೀಡಿದೆ.

SCROLL FOR NEXT