ಕಮ್ಯುನಿಸ್ಟರು ಭಾರತೀಯ ಸಂಸ್ಕೃತಿಯನ್ನು ಗೌರವಿಸುವುದಿಲ್ಲ: ಪಿಣರಾಯಿ ಸರ್ಕಾರಕ್ಕೆ ಮೋದಿ ಚಾಟಿ
ಕೊಲ್ಲಂ: ಕೇರಳಕ್ಕೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಶಬರಿಮಲೆ ವಿಷಯವನ್ನು ಪ್ರಸ್ತಾಪಿಸಿದ್ದು ಪಿಣರಾಯಿ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.
ಸಿಪಿಐ-ಎಂ ನೇತೃತ್ವದ ಎಲ್ ಡಿ ಎಫ್ ಹಾಗೂ ವಿಪಕ್ಷ ಯುಡಿಎಫ್ ವಿರುದ್ಧ ವಾಗ್ದಾಳಿ ನಡೆಸಿರುವ ಪ್ರಧಾನಿ ಮೋದಿ, ಕಮ್ಯುನಿಸ್ಟರು ಭಾರತೀಯ ಸಂಸ್ಕೃತಿಯನ್ನು ಆಧ್ಯಾತ್ಮವನ್ನು ಗೌರವಿಸುವುದಿಲ್ಲ ಎಂದು ಆರೋಪಿಸಿದ್ದಾರೆ.
ಎಲ್ ಡಿಎಫ್ ಹಾಗೂ ಯುಡಿಎಫ್ ಎರಡೂ ಒಂದೇ ನಾಣ್ಯದ ಎರಡು ಮುಖಗಳಾಗಿದ್ದು ರಾಜ್ಯದ ಜನತೆಯನ್ನು ನಿರ್ಲಕ್ಷಿಸುತ್ತಿವೆ ಎಂದು ಹೇಳಿದ್ದಾರೆ.
ಇದೇ ವೇಳೆ ಶಬರಿಮಲೆ ವಿಷಯದಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧವೂ ವಾಗ್ದಾಳಿ ನಡೆಸಿರುವ ಮೋದಿ, ಶಬರಿಮಲೆ ವಿಷಯದಲ್ಲಿ ಕಾಂಗ್ರೆಸ್ ದ್ವಿಮುಖ ನೀತಿ ಅನುಸರಿಸುತ್ತಿದೆ ಈ ವಿಷಯದಲ್ಲಿ ಕಾಂಗ್ರೆಸ್ ನವರು ಪಾರ್ಲಿಮೆಂಟ್ ನಲ್ಲಿ ಒಂದು ರೀತಿ ಮಾತನಾಡಿದರೆ ಪಥನಂತಿಟ್ಟದಲ್ಲಿ ಒಂದು ರೀತಿ ಮಾತನಾಡುತ್ತಾರೆ ಎಂದು ಮೋದಿ ಟೀಕಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics