ಸಾಂದರ್ಭಿಕ ಚಿತ್ರ 
ದೇಶ

ಪಂಜಾಬ್: ಮತ್ತೊಬ್ಬ ಎಎಪಿ ಶಾಸಕನಿಂದ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ

ಪಂಜಾಬಿನ ಆಮ್ ಆದ್ಮಿ ಪಕ್ಷದ ನಾಯಕ ಬಲ್ದೇವ್ ಸಿಂಗ್ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವ ಮೂಲಕ ನಾಯಕರಿಗೆ ಭಾರೀ ಆಘಾತ ...

ಚಂಡಿಗಡ: ಪಂಜಾಬಿನ ಆಮ್ ಆದ್ಮಿ ಪಕ್ಷದ ನಾಯಕ ಬಲ್ದೇವ್ ಸಿಂಗ್ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವ ಮೂಲಕ ನಾಯಕರಿಗೆ ಭಾರೀ ಆಘಾತ ನೀಡಿದ್ದಾರೆ.
ಪಂಜಾಬಿನ ಜೈಟೋ ವಿಧಾನಸಭಾ ಕ್ಷೇತ್ರದ ಸದಸ್ಯರಾದ ಬಲ್ದೇವ್ ಸಿಂಗ್ ಅವರು, ಪಕ್ಷದ ಇಬ್ಬಂದಿ ನೀತಿಯಿಂದ ಬೇಸತ್ತು ರಾಜೀನಾಮೆ ನೀಡಿರುವುದಾಗಿ ಹೇಳಿಕೊಂಡಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಕೇಜ್ರಿವಾಲ್ ಸ್ಪರ್ಧಿಸುವುದು ಅನುಮಾನ ನಾನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ರಾಜೀನಾಮೆ ನೀಡುತ್ತಿರುವುದಾಗಿ ಈ ಮೂಲಕ ತಿಳಿಸಲು ವಿಷಾದಿಸುತ್ತೇನೆ. ಆದರೆ ಪಕ್ಷ ತನ್ನ ಮೂಲ ತತ್ವ ಮತ್ತು ಆದರ್ಶವನ್ನು ಮರೆತಿದೆ. 
ಪಕ್ಷದಲ್ಲಿ ಸರ್ವಾಧಿಕಾರಿ ಮನೋಭಾವ ತಲೆದೂರಿದೆ. ನನಗೆ ರಾಜೀನಾಮೆ ನೀಡದೆ ಬೇರೆ ದಾರಿ ಇರಲಿಲ್ಲ ಎಂದು ಸಿಂಗ್ ಹೇಳಿದ್ದಾರೆ.
ಇದೇ ತಿಂಗಳು ಅಂದರೆ ಜನವರಿ 06 ರಂದು ಆಮ್ ಆದ್ಮಿ ಪಕ್ಷದ ಶಾಸಕ ಸುಖ್ಪಾಲ್ ಖೈರಾ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT