ಕಮಲನಾಥ್ 
ದೇಶ

ಕರ್ನಾಟಕ ಬೆನ್ನಲ್ಲೇ ಮಧ್ಯಪ್ರದೇಶದಲ್ಲಿ ಕಮಲ್‌ನಾಥ್ ಸರ್ಕಾರ ಉರುಳಿಸಲು ಬಿಜೆಪಿ ಸಿದ್ಧತೆ?

ಆಪರೇಷನ್ ಬಿಜೆಪಿ ಮೂಲಕ ಕರ್ನಾಟಕದಲ್ಲಿ ಮೈತ್ರಿ ಸರ್ಕಾರವನ್ನು ಉರುಳಿಸುವ ಪ್ರಯತ್ನಗಳು ನಡೆಯುತ್ತಿರುವ ಬೆನ್ನಲ್ಲೇ ಇದೀಗ ಮಧ್ಯಪ್ರದೇಶಲ್ಲೂ ಕಾಂಗ್ರೆಸ್...

ನವದೆಹಲಿ: ಆಪರೇಷನ್ ಬಿಜೆಪಿ ಮೂಲಕ ಕರ್ನಾಟಕದಲ್ಲಿ ಮೈತ್ರಿ ಸರ್ಕಾರವನ್ನು ಉರುಳಿಸುವ ಪ್ರಯತ್ನಗಳು ನಡೆಯುತ್ತಿರುವ ಬೆನ್ನಲ್ಲೇ ಇದೀಗ ಮಧ್ಯಪ್ರದೇಶಲ್ಲೂ ಕಾಂಗ್ರೆಸ್ ಸರ್ಕಾರ ಉರುಳಿಸಿ ಸರ್ಕಾರ ರಚನೆಗೆ ಬಿಜೆಪಿ ಸಿದ್ಧತೆ ನಡೆಸಿದೆ ಎಂಬ ವದಂತಿಗಳು ಹರಡಿವೆ. 
ಮುಖ್ಯಮಂತ್ರಿ ಕಮಲ್‌ನಾಥ್ ಸರ್ಕಾರವನ್ನು ಉರುಳಿಸಿ ಬಿಜೆಪಿ ಸರ್ಕಾರ ಸ್ಥಾಪಿಸಲು ಸಿದ್ಧತೆ ನಡೆಸಿದೆ ಎಂಬ ಆತಂಕ ಕಾಂಗ್ರೆಸ್ ಪಾಳಯದಲ್ಲಿ ದಿಗಿಲು ಹುಟ್ಟಿಸಿದೆ. ಕರ್ನಾಟಕದಲ್ಲಿ ಸರ್ಕಾರ ಉರುಳಿಸುವ ಬಿಜೆಪಿ ಯತ್ನ ವಿಫಲವಾಗುತ್ತದೆ ಎಂದು ಕಾಂಗ್ರೆಸ್ ಹೇಳಿಕೊಳ್ಳುತ್ತಿದ್ದರೂ, ಬಿಜೆಪಿ ತನ್ನ ಪಟ್ಟು ಸಡಲಿಸದು ಎಂಬುದು ಕಾಂಗ್ರೆಸ್ ನಾಯಕರಿಗೆ ಮನವರಿಕೆಯಾಗಿದೆ. ಇನ್ನು ಭೋಪಾಲದಲ್ಲಿ ಸರ್ಕಾರವನ್ನು ಉರುಳಿಸಲು ಬಿಜೆಪಿ ಸದ್ದಿಲ್ಲದೆ ಹವಣಿಸುತ್ತಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕರೊಬ್ಬರು ಹೇಳಿದ್ದಾರೆ. 
ಸುದೀರ್ಘ 15 ವರ್ಷಗಳ ಬಳಿಕ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸಿದ್ದು 230 ಸದಸ್ಯರ ವಿಧಾನಸಭೆಯಲ್ಲಿ ಬಿಜೆಪಿ 109 ಸ್ಥಾನಗಳನ್ನು ಗಳಿಸಿದೆ. ಬಿಜೆಪಿಗೆ ಬಹುಮತಕ್ಕೆ ಕೇವಲ 7 ಸೀಟುಗಳ ಕೊರತೆ ಉಂಟಾಗಿತ್ತು. ಇನ್ನು ಕಾಂಗ್ರೆಸ್ ಗೂ ಎರಡು ಸ್ಥಾನಗಳ ಕೊರತೆಯಿತ್ತು. ಸದ್ಯ ನಾಲ್ವರು ಪಕ್ಷೇತರ ಶಾಸಕರು ಹಾಗೂ ಇಬ್ಬರು ಬಿಎಸ್ಪಿ ಶಾಸಕರ ಬೆಂಬಲದಿಂದ ಕಾಂಗ್ರೆಸ್ ಸರ್ಕಾರ ರಚಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ-Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT