ದೇಶ

ಸಿಬಿಐ ಹಂಗಾಮಿ ನಿರ್ದೇಶಕರ ನೇಮಕ ಪ್ರಶ್ನಿಸಿ ಅರ್ಜಿ: ಸುಪ್ರೀಂ ಕೋರ್ಟ್ ನಲ್ಲಿ ಮುಂದಿನ ವಾರ ವಿಚಾರಣೆ

Srinivas Rao BV
ಸಿಬಿಐಗೆ ನಾಗೇಶ್ವರ್ ರಾವ್ ಅವರನ್ನು ಹಂಗಾಮಿ ನಿರ್ದೇಶಕರನ್ನಾಗಿ ನೇಮಕ ಮಾಡಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮುಂದಿನ ವಾರ ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ. 
ಕಾಮನ್ ಕಾಸ್ ಎಂಬ ಎನ್ ಜಿಒ ಹಾಗೂ ಆರ್ ಟಿಐ ಕಾರ್ಯಕರ್ತರಾದ ಅಂಜಲಿ ಭಾರದ್ವಾಜ್, ಸಿಬಿಐಗೆ ನಾಗೇಶ್ವರ್ ರಾವ ವರನ್ನು ಹಂಗಾಮಿ ನಿರ್ದೆಶಕರನ್ನಾಗಿ ನೇಮಕ ಮಾಡಿರುವುದನ್ನು ಪ್ರಶ್ನಿಸಿದ್ದು, ಶುಕ್ರವಾರದಂದು ವಿಚಾರಣೆ ನಡೆಸಬೇಕೆಂದು ಮನವಿ ಮಾಡಿದ್ದರು. ಆದರೆ ಶುಕ್ರವಾರದಂದು ವಿಚಾರಣೆ ನಡೆಸಲು ಸಾಧ್ಯವೇ ಇಲ್ಲ ಎಂದು  ಅರ್ಜಿದಾರರ ಪರವಾಗಿ ಹಾಜರಾಗಿದ್ದ ವಕೀಲ ಪ್ರಶಾಂತ್ ಭೂಷಣ್ ಗೆ ಹೇಳಿದ್ದು ವಿಚಾರಣೆಯನ್ನು ಮುಂದಿನ ವಾರಕ್ಕೆ ಮುಂದೂಡಿದೆ. 
ಅಲೋಕ್ ಕುಮಾರ್ ವರ್ಮಾ ಅವರನ್ನು ಸಿಬಿಐ ನಿರ್ದೇಶಕ ಹುದ್ದೆಯಿಂದ ವಜಾಗೊಳಿಸಿದ ಬಳಿಕ, ಪ್ರಧಾನಿ ಮೋದಿ ನೇತೃತ್ವದ ಉನ್ನತ ಮಟ್ಟದ ಸಮಿತಿ ಹೊಸ ನಿರ್ದೇಶಕರ ನೇಮಕ ಮಾಡುವವರೆಗೂ ಹೆಚ್ಚುವರಿ ನಿರ್ದೇಶಕ ನಾಗೇಶ್ವರ್ ರಾವ್ ಅವರಿಗೆ ಹಂಗಾಮಿ ನಿರ್ದೇಶಕ ಸ್ಥಾನವನ್ನು ನೀಡಲಾಗಿತ್ತು. 
ಕಳೆದ ವರ್ಷ ಅಕ್ಟೋಬರ್ 23 ರಂದು ನಾಗೇಶ್ವರ್ ರಾವ್ ಅವರನ್ನು ಸಿಬಿಐ ನ ಹಂಗಾಮಿ ಮುಖ್ಯಸ್ಥರನ್ನಾಗಿ ನೇಮಕ ಮಾಡಿದ್ದನ್ನು ಸುಪ್ರೀಂ ಕೋರ್ಟ್ ಅನೂರ್ಜಿತಗೊಳಿಸಿತ್ತು. ಇದನ್ನೇ ಉಲ್ಲೇಖಿಸಿರುವ ಅರ್ಜಿದಾರರು, ಸರ್ಕಾರ ಅಕ್ರಮವಾಗಿ ಈಗ ನಾಗೇಶ್ವರ್ ರಾವ್ ಅವರನ್ನು ಹಂಗಾಮಿ ಮುಖ್ಯಸ್ಥರನ್ನಾಗಿ ನೇಮಿಸಿದೆ ಎಂದು ಕೋರ್ಟ್ ನಲ್ಲಿ ವಾದಿಸಿದ್ದು ನೇಮಕವನ್ನು ಪ್ರಶ್ನಿಸಿದ್ದಾರೆ. 
SCROLL FOR NEXT