ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ಗುರುವಾರ ಭದ್ರತಾ ಪಡೆಗಳ ಮೇಲೆ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದು, ಘಟನೆಯಲ್ಲಿ ಮೂವರು ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ.
ನಗರದ ಝಿರೋ ಬ್ರಿಡ್ಜ್ ಬಳಿ ಉಗ್ರರು ಗ್ರೆನೇಡ್ ಎಸೆದಿದ್ದು, ದಾಳಿಯಲ್ಲಿ ಸಂಚಾರಿ ಪೊಲೀಸ್ ಪೇದೆ ಸೇರಿದಂತೆ ಮೂವರು ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನ್ಯಾಷನಲ್ ಕಾನ್ಫೆರೆನ್ಸ್ ಮುಖ್ಯ ಕಚೇರಿ ಹಾಗೂ ಆಲ್ ಇಂಡಿಯಾ ರೇಡಿಯೋ ಕಚೇರಿಯಿಂದ ಕೇವಲ 100 ಮೀಟರ್ ದೂರದಲ್ಲಿ ಈ ದಾಳಿ ನಡೆದಿದೆ.
ಭದ್ರತಾ ಸಿಬ್ಬಂದಿ ಉಗ್ರರಾಗಿ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.