ಸಂಗ್ರಹ ಚಿತ್ರ 
ದೇಶ

ತತ್ ಕ್ಷಣದಿಂದಲೇ ಜಾರಿಗೆ ಬರುವಂತೆ ಸಿಬಿಐ ನಿರ್ದೇಶಕ ರಾಕೇಶ್ ಆಸ್ತಾನ ಅಧಿಕಾರಾವಧಿ ಮೊಟಕು!

ಪ್ರಮುಖ ಬೆಳವಣಿಗೆಯೊಂದರಲ್ಲಿ ಕೇಂದ್ರ ಸರ್ಕಾರ ಸಿಬಿಐ ನಿರ್ದೇಶಕ ರಾಕೇಶ್ ಆಸ್ತಾನ ಅವರ ಅಧಿಕಾರಾವಧಿಯನ್ನು ತತ್ ಕ್ಷಣದಿಂದಲೇ ಜಾರಿಗೆ ಬರುವಂತೆ ಮೊಟಕುಗೊಳಿಸಿ ಕಡ್ಡಾಯ ರಜೆ ಮೇಲೆ ಕಳುಹಿಸಿದೆ ಎಂದು ತಿಳಿದುಬಂದಿದೆ.

ನವದೆಹಲಿ: ಪ್ರಮುಖ ಬೆಳವಣಿಗೆಯೊಂದರಲ್ಲಿ ಕೇಂದ್ರ ಸರ್ಕಾರ ಸಿಬಿಐ ನಿರ್ದೇಶಕ ರಾಕೇಶ್ ಆಸ್ತಾನ ಅವರ ಅಧಿಕಾರಾವಧಿಯನ್ನು ತತ್ ಕ್ಷಣದಿಂದಲೇ ಜಾರಿಗೆ ಬರುವಂತೆ ಮೊಟಕುಗೊಳಿಸಿ ಕಡ್ಡಾಯ ರಜೆ ಮೇಲೆ ಕಳುಹಿಸಿದೆ ಎಂದು ತಿಳಿದುಬಂದಿದೆ.
ಅಲೋಕ್ ವರ್ಮಾ ರಾಜಿನಾಮೆ ಪ್ರಹಸನದ ಬೆನ್ನಲ್ಲೇ ಸಿಬಿಐನಲ್ಲಿ ಮತ್ತಷ್ಟು ಚಟುವಟಿಕೆಗಳು ಗರಿಗೆದರಿದ್ದು, ಇದೀಗ ತತ್ ಕ್ಷಣದಿಂದಲೇ ಜಾರಿಗೆ ಬರುವಂತೆ ಸಿಬಿಐ ನಿರ್ದೇಶಕ ರಾಕೇಶ್ ಆಸ್ತಾನರ ಅಧಿಕಾರಾವಧಿಯನ್ನು ಕೇಂದ್ರ ಸರ್ಕಾರ ಮೊಟಕುಗೊಳಿಸಿದೆ.ಕೇವಲ ರಾಕೇಶ್ ಆಸ್ತಾನ ಮಾತ್ರವಲ್ಲದೇ ಸಿಬಿಐನ ಜಂಟಿ ನಿರ್ದೇಶಕ ಅರುಣ್ ಕುಮಾರ್ ಶರ್ಮಾ, ಉಪ ಇನ್ಸ್ ಪೆಕ್ಟರ್ ಜನರಲ್ ಮನೀಶ್ ಕುಮಾರ್ ಸಿನ್ಹಾ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಜಯಂತ್ ಜೆ ನಾಯ್ಕನಾವರೆ ಅವರನ್ನೂ ಕಡ್ಡಾಯ ರಜೆ ಮೇಲೆ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ.
ಈ ಹಿಂದೆ ಅಲೋಕ್ ಕುಮಾರ್ ವರ್ಮಾ ಮತ್ತು ರಾಕೇಶ್ ಆಸ್ತಾನ ಅವರ ನಡುವಿನ ಪರಸ್ಪರ ಭ್ರಷ್ಟಾಚಾರದ ಕೆಸರೆರಚಾಟ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದಲ್ಲದೇ ಸಿಬಿಐ ಸಂಸ್ಥೆಯ ಘನತೆಗೆ ಚ್ಯುತಿ ತಂದಿತ್ತು. ಅಲ್ಲದೆ ಅಲೋಕ್ ವರ್ಮಾ ಅವರು ಸಿಬಿಐ ಮುಖ್ಯಸ್ಥರಾಗಿದ್ದ ಸಂದರ್ಭದಲ್ಲಿ ರಾಕೇಶ್ ಆಸ್ತಾನ ವಿರುದ್ಧ ಭ್ರಷ್ಟಾಚಾರದ ದೂರು ಕೂಡ ದಾಖಲಾಗಿತ್ತು. ಇವರಿಬ್ಬರ ನಡುವಿನ ಮುಸುಕಿನ ಗುದ್ದಾಟ ಬೆನ್ನಲ್ಲೇ ಕೇಂದ್ರ ಸರ್ಕಾರ ಎಂ ನಾಗೇಶ್ವರರಾವ್ ಅವರನ್ನು ಸಿಬಿಐನ ಹಂಗಾಮಿ ಮುಖ್ಯಸ್ಥರಾಗಿ ನೇಮಕ ಮಾಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ಶಿವಮೊಗ್ಗ: 10 ಕಿಲೋ ವ್ಯಾಟ್ FM ಟ್ರಾನ್ಸ್ಮಿಟರ್ ಕೇಂದ್ರ ಉದ್ಘಾಟನೆ! ಆಕಾಶವಾಣಿ, ದೂರದರ್ಶನ ಅಭಿವೃದ್ದಿಗೆ 2,500 ಕೋಟಿ ಹಣ ವೆಚ್ಚ- ಡಾ. ಎಲ್ ಮುರುಗನ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

SCROLL FOR NEXT