ಸಾಂದರ್ಭಿಕ ಚಿತ್ರ 
ದೇಶ

ಲಡಾಖ್ ನಲ್ಲಿ ಹಿಮಪಾತ: ಐವರು ಸಾವು, ಏಳು ಮಂದಿಗಾಗಿ ಹುಡುಕಾಟ

ಜಮ್ಮು ಮತ್ತು ಕಾಶ್ಮೀರದ ಲಡಾಖ್ ನ ಖರ್ದುಂಗ್ ಲಾದಲ್ಲಿ ಭಾರೀ ಹಿಮಪಾತವಾಗಿದ್ದು, ಘಟನೆಯಲ್ಲಿ ಐವರು ಮೃತಪಟ್ಟಿದ್ದಾರೆ....

ಲಡಾಖ್: ಜಮ್ಮು ಮತ್ತು ಕಾಶ್ಮೀರದ ಲಡಾಖ್ ನ ಖರ್ದುಂಗ್ ಲಾದಲ್ಲಿ ಭಾರೀ ಹಿಮಪಾತವಾಗಿದ್ದು, ಘಟನೆಯಲ್ಲಿ ಐವರು ಮೃತಪಟ್ಟಿದ್ದಾರೆ ಮತ್ತು ಇನ್ನು ಏಳು ಮಂದಿಗಾಗಿ ಶೋಧ ಕಾರ್ಯಚರಣೆ ಮುಂದುವರೆದಿದೆ.
ಇಂದು ಬೆಳಗ್ಗೆ ಹಿಮ ತುಂಬಿಕೊಳ್ಳಲು 12 ಜನರಿದ್ದ ಒಂದು ಸ್ಕಾರ್ಪಿಯೋ ಮತ್ತು ಎರಡು ಟಿಪ್ಪರ್ ಗಳು ಖರ್ದುಂಗ್‌ ಲಾ ಕಡೆಗೆ ಹೋಗಿದ್ದವು. ಒಂದು ಟಿಪ್ಪರ್‌ ನಲ್ಲಿ ಹಿಮ ತುಂಬಲ್ಪಟ್ಟು ಇನ್ನೊಂದರಲ್ಲಿ ತುಂಬುವ ವೇಳೆ ಹಿಮಪಾತವಾಗಿದೆ. ಪರಿಣಾಮವಾಗಿ ಮೂರೂ ವಾಹನಗಳು ಮತ್ತು ಅದರೊಳಗಿದ್ದ 12 ಮಂದಿ ಹಿಮದಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೇನೆ ಮತ್ತು ಪೊಲೀಸರು ಜಂಟಿ ಶೋಧ ಕಾರ್ಯಾಚರಣೆ ಕೈಗೊಂಡಿದ್ದು, ಹಿಮಪಾತದಲ್ಲಿ ಸಿಲುಕಿದ್ದ ಐವರ ಮೃತ ದೇಹವನ್ನು ಹೊರತೆಗೆಯಲಾಗಿದ್ದು, ಇನ್ನು ಏಳು ಮಂದಿಗಾಗಿ ಕಾರ್ಯಾಚರಣೆ ಮುಂದುವರೆದಿದೆ. 
ಕಳೆದ ಕೆಲವು ದಿನಗಳಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಹಿಮಪಾತವಾಗುತ್ತಿದೆ. ಈ ಬಗ್ಗೆ ಗುರುವಾರವೇ ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು

ಮತ ಕಳ್ಳತನದಿಂದಲೇ ಮೋದಿ ಪ್ರಧಾನಿಯಾಗಿದ್ದು, ಗೆಲ್ಲಲಾಗದ ರಾಜ್ಯಗಳಲ್ಲೂ BJP ಗೆಲುವು: ಅಭಿಜೀತ್ ದೀಪ್ಕೆ

ರಾಜ್ಯದ ಬಾಕಿ ಹಣದ ಬಗ್ಗೆ ನಿರ್ಮಲಾ ಸೀತಾರಾಮನ್ ಜೊತೆ ಚರ್ಚೆ: GST ಮಂಡಳಿ ಸಭೆ ಬಳಿಕ CM ಡಿಕೆ.ಶಿವಕುಮಾರ್ ಹರ್ಷ

ಉತ್ತರ ಭಾರತ ವ್ಯಕ್ತಿಯಿಂದ ಡಿಕೆಶಿ ಸಿಲುಕಿಸಲು ಯತ್ನ: ಸಚಿವ ಸತೀಶ್ ಜಾರಕಿಹೊಳಿ