ಕೊಲ್ಕೊತಾ: ಜನವರಿ 19 ರಂದು ನಡೆಯಲಿರುವ ಮೆಗಾ ರ್ಯಾಲಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪಾಲಿಗೆ 'ಮರಣ ಮೃದಂಗ' ಆಗಲಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷಗಳು ಮುಂದಿನ ಚುನಾವಣೆಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತವೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಪ್ರಜಾಸತ್ತಾತ್ಮಕ ಪಕ್ಷಗಳು, ಅದು ಪ್ರಾದೇಶಿಕ ಪಕ್ಷಗಳು ಮುಂದಿನ ಚುನಾವಣೆ ನಂತರ ನಿರ್ಣಾಯಕ ಆಗುತ್ತವೆ ಎಂದು ಕೋಲ್ಕತ್ತಾದಲ್ಲಿ ಹೇಳಿದ್ದಾರೆ. ತೃಣಮೂಲ ಕಾಂಗ್ರೆಸ್ ಪಕ್ಷವು ಜನವರಿ 19ರಂದು ಬೃಹತ್ ಸಭೆ ಆಯೋಜಿಸಿದ್ದು, ಅದರಲ್ಲಿ ದೇಶದಾದ್ಯಂತ ಇರುವ ಪ್ರಾದೇಶಿಕ ಪಕ್ಷಗಳ ನಾಯಕರು ಪಾಲ್ಗೊಳ್ಳಲಿದ್ದಾರೆ.
ಈ ಸಭೆಯು ಬಿಜೆಪಿ ಪಾಲಿಗೆ ಮರಣ ಮೃದಂಗ ಆಗಲಿದೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಖಂಡಿತವಾಗಿಯೂ ಬಿಜೆಪಿ ನೂರಿಪ್ಪತ್ತೈದಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಜಯ ಗಳಿಸುವುದಿಲ್ಲ ಎಂದು ಮಮತಾ ಹೇಳಿದ್ದಾರೆ,
ಬ್ರಿಗೇಡ್ ಪರೇಡ್ ಮೈದಾನದಲ್ಲಿ ಸಭೆಗಾಗಿ ನಡೆಯುತ್ತಿರುವ ತಯಾರಿಯನ್ನು ಅವರು ವೀಕ್ಷಿಸಿದರು.