ದೇಶ

2019 ರ ಲೋಕಸಭೆ ಚುನಾವಣೆ 2ನೇ ಸ್ವಾತಂತ್ರ್ಯ ಸಂಗ್ರಾಮದಂತೆ: ಕೋಲ್ಕತಾ ಮೆಗಾ ರ್ಯಾಲಿಯಲ್ಲಿ ಸ್ಟಾಲಿನ್

Shilpa D
ಕೋಲ್ಕತಾ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತಮ್ಮ ಒಗ್ಗಟ್ಟು ತೋರಿಸಲು ಹಲವು ರಾಜ್ಯಗಳ ರಾಜಕೀಯ ಘಟಾನುಘಟಿಗಳು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಆಯೋಜಿಸಿರುವ ರ್ಯಾಲಿಯಲ್ಲಿ ಭಾಗವಹಿಸಿದ್ದಾರೆ.
ಈ ರ್ಯಾಲಿಗೆ ರಾಹುಲ್ ಗಾಂಧಿಯವರು ಇಂದಿನ ರ್ಯಾಲಿಯಲ್ಲಿ ಭಾಗವಹಿಸುತ್ತಿಲ್ಲವಾದರೂ ಅವರ ಪರವಾಗಿ ಕಾಂಗ್ರೆಸ್ ನಿಂದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಭಾಗವಹಿಸಲಿದ್ದಾರೆ. 
ನಿಜವಾದ ರಾಷ್ಟ್ರೀಯತೆಯಿಂದ ಮಾತ್ರ ಅಭಿವೃದ್ಧಿ ಸಾಧ್ಯ ಎಂಬ ಪ್ರಜಾಪ್ರಭುತ್ವದ ಮೌಲ್ಯಗಳನ್ನು ನಂಬಿಕೆಯಡಿ ಎಲ್ಲಾ ವಿರೋಧ ಪಕ್ಷಗಳು ಒಗ್ಗೂಡಿವೆ. ಸಾಮಾಜಿಕ ನ್ಯಾಯ ಹಾಗೂ ಜಾತ್ಯಾತೀತತೆ ಇವುಗಳ ಪ್ರಮುಖ ಉದ್ದೇಶ, ಬಿಜೆಪಿ ಯೋಜನೆ ಹಾಗೂ ನರೇಂದ್ರ ಮೋದಿ ಅವರನ್ನು ಅಧಿಕಾರದಿಂದ ದೂರ ಇಡುವುದು ಈ ವಿರೋಧ ಪಕ್ಷಗಳ ಪ್ರಮುಖ ಅಜೆಂಡಾವಾಗಿದೆ,
ರ್ಯಾಲಿಯಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ, ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್, ಶರದ್ ಯಾದವ್ ಎಂ.ಕೆ ಸ್ಟಾಲಿನ್, ಜಮ್ಮು ಕಾಶ್ಮೀರ ಮಾಜಿ ಸಿಎಂ ಫಾರೂಖ್ ಅಬ್ದುಲ್ಲಾ ಸೇರಿದಂತೆ ಹಲವರು ಭಾಗವಹಿಸಿದ್ದಾರೆ.
ಇದು ಕೇವಲ ಒಬ್ಬ ವ್ಯಕ್ತಿಯನ್ನು ಅಧಿಕಾರದಿಂದ ಕೆಳಗಿಳಿಸುವುದಲ್ಲ,  ಅದರೊಟ್ಟಿಗೆ ಅವರ ಸಿದ್ದಾಂತಗಳನ್ನು ಸೋಲಿಸುವ ಸಲುವಾಗಿ ನಾವೆಲ್ಲರೂ ಒಗ್ಗೂಡಿದ್ದೇವೆ ಎಂದು ಮಾಜಿ ಕೇಂದ್ರ ಸಚಿವ ಯಶ್ವಂತ್ ಸಿನ್ಹಾ ಹೇಳಿದ್ದಾರೆ.
ರ್ಯಾಲಿಯಲ್ಲಿ ಮಾತನಾಡಿದ ದಲಿತ ಮುಖಂಡ ಜಿಗ್ನೇಶ್ ಮೇವಾನಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮಹಾಘಟ್ ಬಂಧನ್ ಆರ್ ಎಸ್ ಎಸ್ ಮತ್ತು ಬಿಜೆಪಿಯನ್ನು ಸೋಲಿಸಲಿದೆ ಎಂದು ಹೇಳಿದ್ದಾರೆ.
ಮುಂಬರುವ ಲೋಕಸಭೆ ಚುನಾವಣೆ ಎರಡನೇ ಸ್ವಾತಂತ್ರ್ಯ ಸಂಗ್ರಾಮವಾಗಲಿದೆ ಎಂದು ಡಿಎಂಕೆ ಮುಖಂಡ ಸ್ಟಾಲಿನ್ ಹೇಳಿದ್ದಾರೆ.
SCROLL FOR NEXT