ಶತ್ರುಘ್ನ ಸಿನ್ಹಾ 
ದೇಶ

ಪ್ರತಿಪಕ್ಷಗಳ ರ್ಯಾಲಿಯಲ್ಲಿ ಭಾಗವಹಿಸಿದ ಶತ್ರುಘ್ನ ಸಿನ್ಹಾ ವಿರುದ್ಧ ಕ್ರಮ: ಬಿಜೆಪಿ

ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧದ ಪ್ರತಿಪಕ್ಷಗಳ ಮೆಗಾ ರ್ಯಾಲಿಯಲ್ಲಿ ಭಾಗವಹಿಸಿದ ಬಿಜೆಪಿ ಬಂಡಾಯ ಸಂಸದ...

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧದ ಪ್ರತಿಪಕ್ಷಗಳ ಮೆಗಾ ರ್ಯಾಲಿಯಲ್ಲಿ ಭಾಗವಹಿಸಿದ ಬಿಜೆಪಿ ಬಂಡಾಯ ಸಂಸದ ಶತ್ರುಘ್ನ ಸಿನ್ಹಾ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ಬಿಜೆಪಿ ಶನಿವಾರ ಹೇಳಿದೆ.
ಮಾಜಿ ಕೇಂದ್ರ ಸಚಿವ, ನಟ ಶತ್ರುಘ್ನ ಸಿನ್ಹಾ ಅವರು ಇಂದು ಪ್ರತಿಪಕ್ಷಗಳ ಶಕ್ತಿ ಪ್ರದರ್ಶನಕ್ಕಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಆಯೋಜಿಸಿರುವ ಒಕ್ಕೂಟ ಭಾರತ ಸಮಾವೇಶದಲ್ಲಿ ಭಾಗವಹಿಸಿ, ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು.
ಈ ಹಿನ್ನೆಲೆಯಲ್ಲಿ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ವಕ್ತಾರ ರಾಜೀವ್ ಪ್ರತಾಪ್ ರುಡಿ ಅವರು, ಸಿನ್ಹಾ ಒಬ್ಬ ಅವಕಾಶವಾದಿ ರಾಜಕಾರಣಿ. ನಮ್ಮ ಪಕ್ಷದ ಸಂಸದರಾಗಿ ಅಧಿಕಾರ ಅನುಭವಿಸುತ್ತ, ವಿವಿಧ ವೇದಿಕೆಗಳಲ್ಲಿ ಪಕ್ಷದ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ ಎಂದರು.
ಶತ್ರುಘ್ನ ಸಿನ್ಹಾ ಅವರು ಹಲವು ವೇದಿಕೆಗಳಲ್ಲಿ ಪಕ್ಷದ ವಿರುದ್ಧ ಮಾತನಾಡಿದ್ದಾರೆ. ಇಂತಹ ವ್ಯಕ್ತಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವ ಅಗತ್ಯ ಇದೆ ಮತ್ತು ಪಕ್ಷ ಅದನ್ನು ಗಂಭೀರವಾಗಿ ಪರಿಗಣಿಸಲಿದೆ ಎಂದು ರೂಡಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್