ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧದ ಪ್ರತಿಪಕ್ಷಗಳ ಮಹಾ ಮೈತ್ರಿ ನಾಯಕತ್ವವನ್ನು ಕಾಂಗ್ರೆಸ್ ವಹಿಸುವುದು ಉತ್ತಮ ಎಂದು ಆರ್ ಜೆಡಿ ಮುಖಂಡ ತೇಜಸ್ವಿ ಯಾದವ್ ಇಂದು ಹೇಳಿದ್ದಾರೆ.
ಪ್ರಾದೇಶಿಕ ಪಕ್ಷಗಳಿಗೆ ಸೂಕ್ತ ಆದ್ಯತೆ ನೀಡಿ, ನಾಯಕತ್ವ ಜವಾಬ್ದಾರಿಯನ್ನು ಸೂಕ್ತ ನಿರ್ವಹಿಸುವ ತಾಕತ್ತು ಹಳೆಯ ರಾಜಕೀಯ ಪಕ್ಷವಾಗಿರುವ ಕಾಂಗ್ರೆಸ್ ಪಕ್ಷಕ್ಕಿದೆ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ.