ಸಾಂದರ್ಭಿಕ ಚಿತ್ರ 
ದೇಶ

ಇವಿಎಂ ಹ್ಯಾಕ್ ಸಾಧ್ಯವಿಲ್ಲ, ದುರುದ್ದೇಶ ಪೂರಿತ ಆರೋಪದ ವಿರುದ್ಧ ಕಾನೂನು ಕ್ರಮಕ್ಕೆ ಚಿಂತನೆ- ಚುನಾವಣಾ ಆಯೋಗ

ಇವಿಎಂ ಹ್ಯಾಕ್ ಮಾಡಬಹುದು ಎಂದು ಭಾರತೀಯ ಸೈಬರ್ ತಜ್ಞರು ಹೇಳುತ್ತಿರುವ ಬೆನ್ನಲ್ಲೇ, ಇವುಗಳನ್ನು ದುರುಪಯೋಗ ಪಡಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.

ನವದೆಹಲಿ: ಭಾರತದಲ್ಲಿ ಚುನಾವಣೆಗಳಿಗೆ ಬಳಸುವ ಇವಿಎಂ- ವಿದ್ಯುನ್ಮಾನ ಮತಯಂತ್ರಗಳನ್ನು ಹ್ಯಾಕ್ ಮಾಡಬಹುದು ಎಂದು ಭಾರತೀಯ ಸೈಬರ್ ತಜ್ಞರು ಹೇಳುತ್ತಿರುವ ಬೆನ್ನಲ್ಲೇ, ಇವುಗಳನ್ನು ದುರುಪಯೋಗ ಪಡಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಯಾವ ರೀತಿಯ ಕಾನೂನು ಕ್ರಮ ಕೈಗೊಳ್ಳಬಹುದೆಂದು ಪರಿಶೀಲಿಸಲಾಗುತ್ತಿದೆ ಎಂದು ಆಯೋಗ ತಿಳಿಸಿದೆ.
2014ರ ಚುನಾವಣೆಯಲ್ಲಿ ಇವಿಎಂ ಹ್ಯಾಕ್ ಮಾಡಲಾಗಿತ್ತು ಎಂದು ಭಾರತೀಯ ಸೈಬರ್ ತಜ್ಞರು ಆರೋಪ ಮಾಡಿದ್ದರು. ಸೈಯದ್  ಸೂಜಾ ಎಂಬುವವರು ಲಂಡನ್ ನಲ್ಲಿ ನಡೆದ ಕಾನ್ಫರೆನ್ಸ್ ಉದ್ದೇಶಿಸಿ ಮಾತನಾಡುವ ವೇಳೆ, ಭಾರತದಲ್ಲಿ ಬಳಕೆ ಮಾಡುವ ಇವಿಎಂಗಳನ್ನು ಸುಲಭವಾಗಿ ಹ್ಯಾಕ್ ಮಾಡಬಹುದು ಎಂದು ಹೇಳಿದ್ದಾರೆ.
2014ರಲ್ಲಿ ಅವರ ತಂಡದ ಕೆಲ ಸದಸ್ಯರನ್ನು ಕೊಂದ ಬಳಿಕ ಜೀವ ಬೆದರಿಕೆಯಿಂದಾಗಿ ಭಾರತವನ್ನು ತೊರೆದಿದ್ದಾಗಿ ಅವರು ಹೇಳಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!

ರಾಜಸ್ಥಾನದ ವಿಚಿತ್ರ ಪ್ರಕರಣ: ಮಕ್ಕಳ ಆರೈಕೆ, ಮನೆ ಸ್ವಚ್ಛತೆಗೆ ಕೈದಿಗಳ ಬಳಕೆ; ಕೊನೆಗೆ ಅದೇ ಜೈಲು ಸೇರಿದ ಅಜ್ಮೀರ್ ಮಹಿಳಾ ಜೈಲರ್‌!

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video

'ಜೀವನ ನರಕ, ನನ್ನ ಪಾಲಿನ ದೆವ್ವ ಸತ್ತಿದೆ, ಸತ್ತ ಮಾತ್ರಕ್ಕೆ ಪಾಪ ಕಳೆಯಲ್ಲ': ನಾನಾ ಪಾಟೇಕರ್ ವಿರುದ್ಧ ನಟಿ ತನುಶ್ರೀ ದತ್ತಾ ಮತ್ತೆ ಕಿಡಿ-Video