ರಾಹುಲ್ ಗಾಂಧಿ 
ದೇಶ

ಈ ಬಾರಿಯ ಗಣರಾಜ್ಯೋತ್ಸವದ ವೇಳೆ ರಾಹುಲ್ ಗಾಂಧಿ ಎಲ್ಲಿ ಕುಳಿತ್ತಿದ್ದರು ಗೊತ್ತ?

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕಳೆದ ವರ್ಷದ 69ನೇ ಗಣರಾಜ್ಯೋತ್ಸವ ಪರೇಡನ್ನು 6ನೇ ಸಾಲಿನಲ್ಲಿ ಕುಳಿತು ಜನಸಾಮಾನ್ಯರಂತೆ ವೀಕ್ಷಣೆ ಮಾಡಿದ್ದರು.

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕಳೆದ ವರ್ಷದ 69ನೇ ಗಣರಾಜ್ಯೋತ್ಸವ ಪರೇಡನ್ನು 6ನೇ ಸಾಲಿನಲ್ಲಿ ಕುಳಿತು ಜನಸಾಮಾನ್ಯರಂತೆ ವೀಕ್ಷಣೆ ಮಾಡಿದ್ದರು. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದ ಕಾಂಗ್ರೆಸ್ ನರೇಂದ್ರ ಮೋದಿ ಸರ್ಕಾರ ಕೀಳುಮಟ್ಟದ ರಾಜಕಾರಣ ಮಾಡುತ್ತಿದೆ ಎಂದು ಕಿಡಿಕಾರಿತ್ತು. 
ಈ ಬಾರಿಯ ಗಣರಾಜ್ಯೋತ್ಸವದಲ್ಲಿ ರಾಹುಲ್ ಗಾಂಧಿಗೆ ಮೊದಲ ಸಾಲಿನಲ್ಲೇ ಆಸನ ವ್ಯವಸ್ಥೆ ಕಲ್ಪಿಸಲಾಗಿತ್ತು. ಕೇಂದ್ರ ಸಚಿವ ನಿತಿನ್ ಗಡ್ಕರಿ ಪಕ್ಕದಲ್ಲೇ ಅವರಿಗೆ ಆಸನದ ವ್ಯವಸ್ಥೆ ಮಾಡಲಾಗಿತ್ತು. ಹೀಗಾಗಿ ಮೊದಲ ಸಾಲಿನಲ್ಲಿ ತಮಗೆ ನೀಡಲಾಗಿದ್ದ ಆಸನದಲ್ಲಿ ಕುಳಿತುಕೊಂಡು ಅವರು ಪರೇಡ್ ವೀಕ್ಷಣೆ ಮಾಡಿದ್ದರು. 
ಪ್ರತಿಬಾರಿಯ ಗಣರಾಜ್ಯೋತ್ಸವದ ವೇಳೆ ಕಾಂಗ್ರೆಸ್ ಅಧ್ಯಕ್ಷರಿಗೆ ಎಲ್ಲ ಬಾರಿಯೂ ಗಣ್ಯರ ಆಸನ ವ್ಯವಸ್ಥೆಯಲ್ಲಿ ಮೊದಲ ಸಾಲು ನೀಡಲಾಗುತ್ತಿತ್ತು. ಆದರೆ ಕಳೆದ ವರ್ಷ ಮಾತ್ರ ಅವರಿಗೆ 6ನೇ ಸಾಲಿನಲ್ಲಿ ಆಸನದ ವ್ಯವಸ್ಥೆ ಮಾಡಿದ್ದರಿಂದ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಸಹ ವ್ಯಕ್ತವಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

'ತಂದಿಟ್ಟ ಗಿಡ ಮನೆಗೇ ಹಾನಿ ಮಾಡಿದ್ರೆ..'; 'ನೋ ಕ್ಲಾಸ್', BiggBoss ಇತಿಹಾಸದ ಅತಿದೊಡ್ಡ ನಿರ್ಧಾರದ ಸುಳಿವು ನೀಡಿದ ಕಿಚ್ಚಾ ಸುದೀಪ್

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌‌ವೇಯಲ್ಲಿ ಅಪಘಾತಕ್ಕೆ ಬಿಗ್ ಟ್ವಿಸ್ಟ್: ಸ್ನೇಹಿತನಿಂದಲೇ ಭೂಮಿಕಾ ಕೊಲೆ?

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!