ಅನಂತ್ ಕುಮಾರ್ ಹೆಗಡೆ ಪ್ರತಿಯೊಬ್ಬ ಭಾರತೀಯರನ್ನು ಮುಜುಗರಪಡಿಸಿದ್ದಾರೆ- ರಾಹುಲ್
ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ ಮೂಲಕ ಪ್ರತಿಯೊಬ್ಬ ಭಾರತೀಯರನ್ನು ಮುಜುಗರಪಡಿಸಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ನವದೆಹಲಿ: ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ ಮೂಲಕ ಪ್ರತಿಯೊಬ್ಬ ಭಾರತೀಯರನ್ನು ಮುಜುಗರಪಡಿಸಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಸಚಿವರಾಗೂ ಯೋಗ್ಯತೆ ಇಲ್ಲದ ಅನಂತ್ ಕುಮಾರ್ ಹೆಗಡೆ ಅವರನ್ನು ಕೂಡಲೇ ಸಚಿವ ಸ್ಥಾನದಿಂದ ವಜಾಗೊಳಿಸಬೇಕೆಂದು ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.