2019 ಲೋಕಸಭಾ, ವಿಧಾನಸಭಾ ಚುನಾವಣೆ: ಚುನಾವಣಾ ಆಯೋಗದಿಂದ ರಾಜ್ಯಗಳಿಗೆ ಪತ್ರ 
ದೇಶ

2019 ಲೋಕಸಭಾ, ವಿಧಾನಸಭಾ ಚುನಾವಣೆ: ಚುನಾವಣಾ ಆಯೋಗದಿಂದ ರಾಜ್ಯಗಳಿಗೆ ಪತ್ರ

2019 ರ ಲೋಕಸಭಾ ಚುನಾವಣೆ ಹಾಗೂ ವಿಧಾನಸಭಾ ಚುನಾವಣೆ ನಡೆಸುವ ಸಂಬಂಧ ಚುನಾವಣಾ ಆಯೋಗ ರಾಜ್ಯದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದೆ.

ನವದೆಹಲಿ: 2019 ರ ಲೋಕಸಭಾ ಚುನಾವಣೆ ಹಾಗೂ ವಿಧಾನಸಭಾ ಚುನಾವಣೆ ನಡೆಸುವ ಸಂಬಂಧ ಚುನಾವಣಾ ಆಯೋಗ ರಾಜ್ಯದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದೆ. 
ಚುನಾವಣೆಗೆ ಸಂಬಂಧಪಟ್ಟ ಅಧಿಕಾರಿಗಳ ವರ್ಗಾವಣೆ ಹಾಗೂ ನೇಮಕಕ್ಕೆ ಸರ್ಕಾರಗಳು ಈಗಲೇ ಕ್ರಮ ಕೈಗೊಳ್ಳಬೇಕೆಂದು ಚುನಾವಣಾ ಆಯೋಗ ಪತ್ರದಲ್ಲಿ ತಿಳಿಸಿದೆ.  16ನೇ ಲೋಕಸಭೆಯ ಅವಧಿ ಜೂನ್ 3 ರಂದು ಅಂತ್ಯಗೊಳ್ಳಲಿದೆ. ಈ ನಡುವೆಯೇ ಆಂಧ್ರಪ್ರದೇಶ, ಒಡಿಸ್ಸಾ ಮತ್ತು ಸಿಕ್ಕಿಂ ರಾಜ್ಯಗಳ ವಿಧಾನಸಭೆ ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.
ರಾಜ್ಯ, ಲೋಕಸಭಾ ಚುನಾವಣೆಗೆ ಸಂಬಂಧಪಟ್ಟ ಅಧಿಕಾರಿಗಳನ್ನು ತಮ್ಮ ಸ್ವ-ಜಿಲ್ಲೆಗಳಲ್ಲಿ ಅಥವಾ ದೀರ್ಘಕಾಲದ ಸೇವೆ ಸಲ್ಲಿಸಿದ ಸ್ಥಳದಲ್ಲಿ ಮುಂದುವರೆಯಲು ಅವಕಾಶ ನೀಡದೇ ವರ್ಗಾವಣೆ ಮಾಡಬೇಕು ಎಂದು ತಿಳಿಸಿದೆ. ಅಧಿಕಾರಿಗಳು 4 ವರ್ಷಗಳಲ್ಲಿ ಅದೇ ಸ್ಥಳದಲ್ಲಿ 3 ವರ್ಷ ಕರ್ತವ್ಯವನ್ನು ಪೂರ್ಣಗೊಳಿಸಿದ್ದರೆ ಅಂತಹ ಅಧಿಕಾರಿಗಳನ್ನು ವರ್ಗಾವಣೆ ಮಾಡಬೇಕು ಎಂದು ಪತ್ರದಲ್ಲಿ ತಿಳಿಸಲಾಗಿದೆ.  ಏಪ್ರಿಲ್-ಮೇ ತಿಂಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್