ರಾಹುಲ್ ಗಾಂಧಿ 
ದೇಶ

ಲೋಕಸಭಾ ಚುನಾವಣೆ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಡವರಿಗೆ ಕನಿಷ್ಠ ಆದಾಯದ ಭದ್ರತೆ- ರಾಹುಲ್

ಏಪ್ರಿಲ್ - ಮೇ ತಿಂಗಳಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದಲ್ಲಿನ ಎಲ್ಲಾ ಬಡವರಿಗೂ ಕನಿಷ್ಠ ಆದಾಯದ ಭದ್ರತೆ ಒದಗಿಸಲಾಗುವುದು ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ನವದೆಹಲಿ: ಏಪ್ರಿಲ್ - ಮೇ ತಿಂಗಳಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದಲ್ಲಿನ ಎಲ್ಲಾ ಬಡವರಿಗೂ ಕನಿಷ್ಠ ಆದಾಯದ ಭದ್ರತೆ ಒದಗಿಸಲಾಗುವುದು  ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಹಾಗೂ ಆಡಳಿತಾ ಬಿಜೆಪಿ ಪಕ್ಷ  ಭಾರತೀಯರನ್ನು ಇಬ್ಬಾಗಿಸಿದ್ದು, ರಾಫೆಲ್ ಹಗರಣ, ಅನಿಲ್ ಅಂಬಾನಿ, ನಿರಾವ್ ಮೋದಿ, ವಿಜಯ್ ಮಲ್ಯ, ಮೆಹುಲ್ ಚೋಕ್ಸಿ ಒಂದು ಕಡೆ ಇದ್ದರೆ  ಇತರ ಬಡ ರೈತರು ಮತ್ತೊಂದು ಕಡೆಯಲ್ಲಿ ಇದ್ದಾರೆ ಎಂದು ಆರೋಪಿಸಿದರು.

15 ವರ್ಷದ ನಂತರ ಛತ್ತೀಸ್ ಗಡದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ನೆರವಾದ ರೈತರಿಗೆ ಅಭಿನಂದನೆ ಸಲ್ಲಿಸಲು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಕಾಂಗ್ರೆಸ್ ಚಾರಿತ್ರಿಕ ನಿರ್ಧಾರ ಕೈಗೊಳ್ಳಲಿದೆ. ದೇಶದಲ್ಲಿನ ಪ್ರತಿಯೊಬ್ಬ ಬಡವರಿಗೂ ಕನಿಷ್ಠ ಆದಾಯ  ಒದಗಿಸಲಾಗುವುದು, ಇದರಿಂದಾಗಿ ದೇಶದಲ್ಲಿನ ಬಡ ಜನರು ಹಸಿವು ಮುಕ್ತರಾಗಲಿದ್ದಾರೆ ಎಂದರು.

ಸಾವಿರಾರು ಸಹೋದರ, ಸಹೋದರಿಯರು ಬಡತನದ ಬೇಗೆಯಿಂದ ಹೊರಬಾರದ ಹೊರತು ನವ ನಿರ್ಮಾಣ ಮಾಡಲು ಸಾಧ್ಯವಿಲ್ಲ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. 
ಲೋಕಸಭಾ ಚುನಾವಣೆಯಲ್ಲಿ ಗೆದ್ದು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಡತನ ಹಾಗೂ ಹಸಿವಿನಿಂದ ಮುಕ್ತಗೊಳಿಸಲು ದೇಶದಲ್ಲಿನ  ಪ್ರತಿಯೊಬ್ಬ ಬಡವರಿಗೂ ಕನಿಷ್ಠ ಆದಾಯದ ಭದ್ರತೆ  ಒದಗಿಸಲಾಗುವುದು. ಇದು ಕಾಂಗ್ರೆಸ್ ಪಕ್ಷದ ಭರವಸೆ  ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ