ರಾಫೆಲ್ ಟ್ವೀಟ್ ಬೆನ್ನಲ್ಲೇ ಗೋವಾ ಮುಖ್ಯಮಂತ್ರಿ ಪರಿಕ್ಕರ್-ರಾಹುಲ್ ಗಾಂಧಿ ಭೇಟಿ
ರಾಫೆಲ್ ಒಪ್ಪಂದದ ಕುರಿತು ಮನೋಹರ್ ಪರಿಕ್ಕರ್ ನ್ನು ಉಲ್ಲೇಖಿಸಿ ಟ್ವೀಟ್ ಮಾಡಿದ್ದ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮನೋಹರ್ ಪರಿಕ್ಕರ್ ನ್ನು ಭೇಟಿ ಮಾಡಿದ್ದಾರೆ.
ಪಣಜಿ: ರಾಫೆಲ್ ಒಪ್ಪಂದದ ಕುರಿತು ಮನೋಹರ್ ಪರಿಕ್ಕರ್ ನ್ನು ಉಲ್ಲೇಖಿಸಿ ಟ್ವೀಟ್ ಮಾಡಿದ್ದ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮನೋಹರ್ ಪರಿಕ್ಕರ್ ನ್ನು ಭೇಟಿ ಮಾಡಿದ್ದಾರೆ.
ಮನೋಹರ್ ಪರಿಕ್ಕರ್ ಅವರು ಅನಾರೋಗ್ಯಕ್ಕೊಳಗಾಗಿದ್ದು ಹಲವು ತಿಂಗಳುಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಮನೋಹರ್ ಪರಿಕ್ಕರ್ ಅವರನ್ನು ಪಣಜಿಯ ನಿವಾಸದಲ್ಲಿ ಭೇಟಿ ಮಾಡಿದ್ದಾರೆ.
ಇದೊಂದು ಸೌಜನ್ಯಯುತ ಭೇಟಿ ಎಂದು ವಿಶ್ಲೇಷಿಸಲಾಗುತ್ತಿದೆ. ಆದರೆ ರಾಹುಲ್ ಪಣಜಿಗೆ ತೆರಳುವುದಕ್ಕೂ ಮುನ್ನ ರಾಫೆಲ್ ಒಪ್ಪಂದದ ಕುರಿತು ಟ್ವೀಟ್ ಮಾಡಿದ್ದರು.
ಗೋವಾ ಪ್ರವಾಸದಲ್ಲಿರುವ ರಾಹುಲ್ ಗಾಂಧಿ " ರಾಫೆಲ್ ಕುರಿತು ಗೋವಾ ಆಡಿಯೋ ಟೇಪ್ ಗಳು ಬಿಡುಗಡೆಯಾಗಿ 30 ದಿನಗಳಾಯಿತು. ಆದರೆ ಈ ವರೆಗೂ ಎಫ್ಐಆರ್ ದಾಖಲಾಗಿಲ್ಲ, ಯಾವುದೇ ಕ್ರಮವನ್ನೂ ಕೈಗೊಂಡಿಲ್ಲ. ಆಡಿಯೋ ಟೇಪ್ ಗಳು ಅಧಿಕೃತವಾದದ್ದಾಗಿದ್ದು, ಗೋವಾ ಸಿಎಂ ಮನೋಹರ್ ಪರಿಕ್ಕರ್ ರಾಫೆಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಹಸ್ಯಗಳನ್ನು ತಮ್ಮ ಬಳಿ ಇಟ್ಟುಕೊಂಡಿದ್ದಾರೆ" ಎಂದು ರಾಹುಲ್ ಟ್ವೀಟ್ ನಲ್ಲಿ ಆರೋಪಿಸಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.