ಸಂಗ್ರಹ ಚಿತ್ರ 
ದೇಶ

ಅಯೋಧ್ಯೆ ವಿವಾದ: ಹೆಚ್ಚುವರಿ ಭೂಮಿ ಹಿಂದಿರುಗಿಸಲು ಅನುಮತಿ ಕೋರಿ ಸುಪ್ರೀಂಗೆ ಕೇಂದ್ರ ಸರ್ಕಾರ ಅರ್ಜಿ

ಲೋಕಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಂತೆಯೇ ವಿವಾದಿತ ರಾಮಜನ್ಮಭೂಮಿ - ಬಾಬ್ರಿ ಮಸೀದಿ ಭೂಮಿಯಲ್ಲಿ ತಾನು ಸ್ವಾಧೀನ ಪಡಿಸಿಕೊಂಡಿದ್ದ ಹೆಚ್ಚುವರಿ ಭೂಮಿಯನ್ನು ಮೂಲ ಮಾಲೀಕರಿಗೆ ಹಿಂದಿರುಗಿಸಲು ಅನುಮತಿ ನೀಡುವಂತೆ ಕೇಂದ್ರ ಸರಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ನವದೆಹಲಿ: ಲೋಕಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಂತೆಯೇ ವಿವಾದಿತ ರಾಮಜನ್ಮಭೂಮಿ - ಬಾಬ್ರಿ ಮಸೀದಿ ಭೂಮಿಯಲ್ಲಿ ತಾನು ಸ್ವಾಧೀನ ಪಡಿಸಿಕೊಂಡಿದ್ದ ಹೆಚ್ಚುವರಿ ಭೂಮಿಯನ್ನು ಮೂಲ ಮಾಲೀಕರಿಗೆ ಹಿಂದಿರುಗಿಸಲು ಅನುಮತಿ ನೀಡುವಂತೆ ಕೇಂದ್ರ ಸರಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. 
1991ರಲ್ಲಿ ಸರ್ಕಾರ ಸ್ವಾಧೀನ ಪಡಿಸಿಕೊಂಡಿದ್ದ ಸುಮಾರು 2.77 ಎಕರೆ ಹೆಚ್ಚುವರಿ ಭೂಮಿಯನ್ನು ಮೂಲ ಮಾಲೀಕರಿಗೆ ಹಿಂದಿರುಗಿಸಬೇಕೆಂದು ರಾಮಜನ್ಮಭೂಮಿ ಟ್ರಸ್ಟ್ ಕೋರಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.  ಹೆಚ್ಚುವರಿ ಭೂಮಿಯನ್ನು ವಿವಾದಿತ ನಿವೇಶನಕ್ಕೆ ಪ್ರವೇಶ ಮತ್ತು ನಿರ್ಗಮನ ದಾರಿ ನಿರ್ಮಿಸಲು ಬಳಸಲಾಗುತ್ತದೆ. ಮಾಲೀಕತ್ವ ದಾವೆಯನ್ನು ಯಾರೇ ಗೆದ್ದರೂ ವಿವಾದಿತ ನಿವೇಶನಕ್ಕೆ ಪ್ರವೇಶ ಮತ್ತು ನಿರ್ಗಮನ ಮಾರ್ಗ ನಿರ್ಮಾಣ ಅನಿವಾರ್ಯ ಎಂದೂ ಕೇಂದ್ರ ಸರ್ಕಾರ ಕೋರ್ಟ್ ಗೆ ತಿಳಿಸಿದೆ. 
ಇದೇ ವೇಳೆ ಹೆಚ್ಚುವರಿ ಭೂಮಿಯನ್ನು ಕೇಂದ್ರ ಸರ್ಕಾರ ತನ್ನ ವಶದಲ್ಲಿ ಇಟ್ಟುಕೊಳ್ಳವುದರಿಂದ ಏನೂ ಪ್ರಯೋಜನವಿಲ್ಲ, ಆದ್ದರಿಂದ ಅದನ್ನು ಮೂಲ ಮಾಲೀಕರಿಗೆ ಹಿಂದಿರುಗಿಸುವುದೇ ಉತ್ತಮ ಎಂದು ಕೇಂದ್ರ ಸರಕಾರ ಕೋರ್ಟಿಗೆ ತಿಳಿಸಿದೆ.
ಇನ್ನು 2003ರಲ್ಲಿ ರಾಮ ಮಂದಿರಕ್ಕಾಗಿ ಅಯೋಧ್ಯೆಯಲ್ಲಿ ಶಿಲಾನ್ಯಾಸ ಪೂಜೆಗೆ ಅನುಮತಿ ನಿರಾಕರಿಸುವ ವೇಳೆ, ವಿವಾದಿತ ಭೂಮಿ ಹಾಗೂ ಸ್ವಾಧೀನ ಪಡಿಸಿಕೊಂಡ 67 ಎಕರೆ ಭೂಮಿಯಲ್ಲಿ ಯಥಾಸ್ಥಿತಿ ಕಾಪಾಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಸೂಚಿಸಿತ್ತು. 67 ಎಕರೆಗೂ ಅಧಿಕ ಭೂಮಿಯಲ್ಲಿ ಬಹುಪಾಲನ್ನು ರಾಮಜನ್ಮಭೂಮಿ ಟ್ರಸ್ಟ್ ತನಗೆ ಸೇರಿದ್ದು ಎಂದು ವಾದಿಸಿತ್ತು. ಇದು ವಿವಾದ ರಹಿತ ಭೂಮಿಯಾಗಿದ್ದು, ಮೂಲ ಮಾಲೀಕರಿಗೆ ಬಿಟ್ಟುಕೊಡಬಹುದಾಗಿದೆ ಎಂದೂ ಹೇಳಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

NCERT ಪಠ್ಯಪುಸ್ತಕ ವಿವಾದ: ನಾವು ನ್ಯಾಯಾಂಗವನ್ನು ಗೌರವಿಸುತ್ತೇವೆ; ಬಿಜೆಪಿ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT