ಇದೂ ಗರೀಬಿ ಹಠಾವೋ ರೀತಿ ನಕಲಿನಾ?: ರಾಹುಲ್ ಗಾಂಧಿಯ ಕನಿಷ್ಟ ಆದಾಯ ಭದ್ರತೆ ಭರವಸೆ ಕುರಿತು ಮಾಯಾವತಿ
ಲೋಕಸಭಾ ಚುನಾವಣೆಯಲ್ಲಿ ಗೆದ್ದು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದಲ್ಲಿನ ಎಲ್ಲಾ ಬಡವರಿಗೂ ಕನಿಷ್ಠ ಆದಾಯದ ಭದ್ರತೆ ಒದಗಿಸಲಾಗುವುದು ಎಂಬ ರಾಹುಲ್ ಗಾಂಧಿ ಭರವಸೆಯ ಬಗ್ಗೆ ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ.
ಬಡವರಿಗೆ ಕನಿಷ್ಟ ಆದಾಯದ ಭದ್ರತೆಯ ಭರವಸೆಯೂ ಗರೀಬಿ ಹಠಾವೋ ಮಾದರಿ ನಕಲೀನಾ? ಎಂದು ಮಾಯಾವತಿ ಟ್ವೀಟ್ ನಲ್ಲಿ ಕೇಳಿದ್ದಾರೆ.
ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿರುವ ಮಾಯಾವತಿ, ಎರಡೂ ಪಕ್ಷಗಳು ಸುಳ್ಳು ಭರವಸೆಗಳಿಂದ ಜನರನ್ನು ಮೂರ್ಖರನ್ನಾಗಿಸಿವೆ ಎಂದು ಮಾಯಾವತಿ ಆರೋಪಿಸಿದ್ದಾರೆ.
ಇದಕ್ಕೂ ಮುನ್ನ ಛತ್ತೀಸ್ ಗಡದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ನೆರವಾದ ರೈತರಿಗೆ ಅಭಿನಂದನೆ ಸಲ್ಲಿಸಲು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಲೋಕಸಭಾ ಚುನಾವಣೆಯಲ್ಲಿ ಗೆದ್ದು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಡತನ ಹಾಗೂ ಹಸಿವಿನಿಂದ ಮುಕ್ತಗೊಳಿಸಲು ದೇಶದಲ್ಲಿನ ಪ್ರತಿಯೊಬ್ಬ ಬಡವರಿಗೂ ಕನಿಷ್ಠ ಆದಾಯದ ಭದ್ರತೆ ಒದಗಿಸಲಾಗುವುದು. ಇದು ಕಾಂಗ್ರೆಸ್ ಪಕ್ಷದ ಭರವಸೆ ಎಂದಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics