ಉಜ್ಜಯಿನಿ: ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೆ 12 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಎರಡು ಕಾರುಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಾದ ಹಿನ್ನೆಲೆಯಲ್ಲಿ 12 ಮಂದಿ ಸಾವನ್ನಪ್ಪಿ, ಓರ್ವ ತೀವ್ರ ಗಾಯಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ತನಿಖೆ ಮುಂದುವರಿದಿದೆ ಎಂದು ತಿಳಿಸಿದ್ದಾರೆ.
ಇನ್ನೂ ಈ ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ, ರಾಜಸ್ತಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಕೂಡ ಸಂತಾಪ ಸೂಚಿಸಿದ್ದಾರೆ.