ಸ್ವರೂಪನಂದ ಸರಸ್ವತಿ 
ದೇಶ

ಪ್ರಧಾನಿ ಮೋದಿ, ಆರ್‌ಎಸ್‌ಎಸ್‌ಗೆ ಸಡ್ಡು; ಫೆ.21 ರಾಮ ಮಂದಿರಕ್ಕೆ ಅಡಿಗಲ್ಲು?: ಪರಮ ಧರ್ಮ ಸಂಸದ್

ರಾಮ ಮಂದಿರ ನಿರ್ಮಾಣ ಮಾಡುವ ಭರವಸೆ ನೀಡಿ ಅಧಿಕಾರಕ್ಕೆ ಬಂದಿದ್ದ ಬಿಜೆಪಿ ಈಗ ಮೀನ ಮೇಷ ಎಣಿಸುತ್ತಿದೆ. ಇನ್ನು ರಾಷ್ಟ್ರೀಯ ಸ್ವಯಂಸೇವಾ ಸಂಘ(ಆರ್ಎಸ್ಎಸ್)...

ನವದೆಹಲಿ: ರಾಮ ಮಂದಿರ ನಿರ್ಮಾಣ ಮಾಡುವ ಭರವಸೆ ನೀಡಿ ಅಧಿಕಾರಕ್ಕೆ ಬಂದಿದ್ದ ಬಿಜೆಪಿ ಈಗ ಮೀನ ಮೇಷ ಎಣಿಸುತ್ತಿದೆ. ಇನ್ನು ರಾಷ್ಟ್ರೀಯ ಸ್ವಯಂಸೇವಾ ಸಂಘ(ಆರ್ಎಸ್ಎಸ್) ಈ ವಿಚಾರದಲ್ಲ ಆಸಕ್ತಿ ತೋರುತ್ತಿಲ್ಲವೆಂದು ಹಿಂದೂ ಸಾಧು ಸಂತರು ಆಕ್ರೋಶಗೊಂಡಿದ್ದಾರೆ. 
ಇಂದು ನಡೆದ ಹಿಂದೂ ಸಾಧು ಸಂತರ ಸಮಾವೇಶ ಪರಮಧರ್ಮ ಸಂಸದ್ ನಲ್ಲಿ ಬಿಜೆಪಿ ಹಾಗೂ ಆರ್ಎಸ್ಎಸ್ ವಿರುದ್ಧ ಬಹಿರಂಗವಾಗಿಯೇ  ಅಸಮಾಧಾನಗೊಂಡಿದ್ದರು. ಅಲ್ಲದೆ ಬಿಜೆಪಿಗೆ ಆರ್ಎಸ್ಎಸ್ ಗೆ ಕಾಯದೆ ತಾವೇ ರಾಮ ಮಂದಿರ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳಲು ಈ ಧರ್ಮ ಸಂಸದ್ ನಿರ್ಧರಿಸಿದೆ. ಸ್ವಾಮಿ ಸ್ವರೂಪಾನಂದ ಅವರಿಗೆ ಈ ಹೊಸ ಹೋರಾಟದ ನೇತೃತ್ವ ವಹಿಸಲಾಗಿದ್ದು ಸ್ವಾಮಿ ಸ್ವರೂಪನಂದ ಅವರು ಫೆಬ್ರವರಿ 21ರಂದು ಅಯೋಧ್ಯೆಯ ವಿವಾದಿತ ಜಾಗದಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಅಡಿಗಲ್ಲು ಹಾಕಲಿದ್ದಾರೆ. 
ಅಯೋಧ್ಯೆ ವಿವಾದಿತ ಜಾಗದ ಪ್ರಕರಣವು ಸದ್ಯ ಸುಪ್ರೀಂ ಕೋರ್ಟ್ ನಲ್ಲಿದೆ. ಆದರೆ ಅಲಹಾಬಾದ್ ಹೈಕೋರ್ಟ್ ತೀರ್ಪಿನ ಆಧಾರದ ಮೇಲೆ ಮಂದಿರ ನಿರ್ಮಾಣ ಕಾರ್ಯ ನಡೆಸಬಹುದು ಎಂಬುದು ಕೆಲ ಹಿಂದೂ ಸಂಘಟನೆಗಳ ಅಭಿಪ್ರಾಯ ಹಾಗೂ ಒತ್ತಾಯವಾಗಿದೆ. ಆದರೆ ಪ್ರಧಾನಿ ಮೋದಿ ಅವರು ಸುಪ್ರೀಂ ಕೋರ್ಟ್ ನಿಂದ ಅಂತಿಮ ತೀರ್ಪು ಬರುವವರೆಗೂ ಮಂದಿರ ನಿರ್ಮಾಣ ವಿಚಾರದಲ್ಲಿ ಸರ್ಕಾರದಿಂದ ಯಾವುದೇ ನಡೆ ಇರುವುದಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್, ಇಂದು ರಾಜೀನಾಮೆ ಅನುಮಾನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿಎಂ ಕುರ್ಚಿ ಕದನ: ಸಿದ್ದರಾಮಯ್ಯ ಮನೆ ಮುಂದೆ ಬೆಂಬಲಿಗರ ಶಕ್ತಿ ಪ್ರದರ್ಶನ, ರಾಜೀನಾಮೆ ನೀಡದಂತೆ ಆಗ್ರಹ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

SCROLL FOR NEXT