ಸಂಗ್ರಹ ಚಿತ್ರ 
ದೇಶ

2 ದಶಕಗಳಿಂದ ಬಳಕೆಯಾಗುತ್ತಿದೆ, ಇವಿಎಂ ಹ್ಯಾಕ್ ಮಾಡಲು ಅಸಾಧ್ಯ: ಸುನಿಲ್ ಅರೋರಾ

ಕಳೆದ 2 ದಶಕಗಳಿಂದಲೂ ಎಲೆಕ್ಟ್ರಾನಿಕ್ ಮತ ಯಂತ್ರಗಳನ್ನು ಬಳಕೆ ಮಾಡಲಾಗುತ್ತಿದ್ದು, ಇವಿಎಂಗಳನ್ನು ಹ್ಯಾಕ್ ಮಾಡಲು ಅಸಾಧ್ಯ ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ಸುನಿಲ್ ಅರೋರಾ ಹೇಳಿದ್ದಾರೆ.

ನವದೆಹಲಿ: ಕಳೆದ 2 ದಶಕಗಳಿಂದಲೂ ಎಲೆಕ್ಟ್ರಾನಿಕ್ ಮತ ಯಂತ್ರಗಳನ್ನು ಬಳಕೆ ಮಾಡಲಾಗುತ್ತಿದ್ದು, ಇವಿಎಂಗಳನ್ನು ಹ್ಯಾಕ್ ಮಾಡಲು ಅಸಾಧ್ಯ ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ಸುನಿಲ್ ಅರೋರಾ ಹೇಳಿದ್ದಾರೆ.
ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಹಿಂದೆಯೂ ಸಾಕಷ್ಟು ಬಾರಿ ಹೇಳಿದ್ದೇನೆ. ಈಗಲೂ ಅದನ್ನೇ ಪುನರುಚ್ಛರಿಸುತ್ತಿದ್ದೇನೆ. ತಾಂತ್ರಿಕವಾಗಿ ಇವಿಎಂಗಳನ್ನು ಹ್ಯಾಕ್ ಮಾಡಲು ಸಾಧ್ಯವಿಲ್ಲ. ಈ ಹಿಂದೆ ನಡೆದ ವಿವಿಧ ಸಭೆಯಲ್ಲಿ ಯಾವುದೇ ರಾಜಕೀಯ ಪಕ್ಷಗಳೂ ಈ ಬಗ್ಗೆ ಚಕಾರವೆತ್ತಿಲ್ಲ, ಈಗ ವಿವಾದ ಅನಗತ್ಯ ಎಂದು ಸುನಿಲ್ ಅರೋರಾ ಹೇಳಿದ್ದಾರೆ.
ಏಕಕಾಲದಲ್ಲೇ ಲೋಕಸಭೆ, ವಿಧಾನಸಭೆ ಚುನಾವಣೆ ಕುರಿತು ಮಾಹಿತಿ ಇಲ್ಲ
ಇದೇ ವೇಳೆ ಮುಂಬರುವ ಲೋಕಸಭಾ ಚುನಾವಣೆ ಸಂದರ್ಭದಲ್ಲೇ ವಿವಿಧ ರಾಜ್ಯಗಳ ವಿಧಾನಸಭೆ ಚುನವಣೆಗಳನ್ನೂ ನಡೆಸಲಾಗುತ್ತದೆಯೇ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅರೋರಾ, ಅಧಿಕೃತವಾಗಿ ಅಥವಾ ಅನಧಿಕೃತವಾಗಿ ಈ ಬಗ್ಗೆ ತಮಗೆ ಯಾವುದೇ ರೀತಿಯ ಮಾಹಿತಿ ಇಲ್ಲ ಎಂದು ಹೇಳಿದರು. ಇದೇ ವೇಳೆ ಜಾರ್ಖಂಡ್ ವಿಧಾನಸಭೆ ಚುನಾವಣೆ ನಿಮಿತ್ತ ಸಿ-ವಿಜಿಲ್ ಆ್ಯಪ್ ಬಿಡುಗಡೆ ಮಾಡುವುದಾಗಿಯೂ ಅರೋರಾ ಮಾಹಿತಿ ನೀಡಿದರು.
ಇದೇ ವೇಳೆ ಮತದಾರರ ಪಟ್ಟಿಯ ಪುನರ್ ಪರಿಶೀಲನೆ ಮತ್ತು ಹೊಸ ಮತದಾರರ ಸೇರ್ಪಡೆ ಕುರಿತಂತೆ ಯೋಜನೆ ರೂಪಿಸಲಾಗಿದೆ. ಅಲ್ಲದೆ ಜಾರ್ಖಂಡ್ ವಿಧಾನಸಭೆ ಚುನಾವಣೆಗೂ ಕೈಗೊಳ್ಳ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಜಿಪಿಎಸ್ ಸಹಿತ ವಿಚಕ್ಷಣ ವಾಹನಗಳು, ಭದ್ರತೆ, ಕುಗ್ರಾಮಗಳಲ್ಲಿ ಮತಗಟ್ಟೆಗಳ ನಿರ್ಮಾಣ, ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಹೆಚ್ಚುವರಿ ಭದ್ರತೆ, ಸೇನಾಪಡೆಗಳ ನಿಯೋಜನೆ, ಇವಿಎಂ ಯಂತ್ರಗಳ ಪರಿಶೀಲನೆ ಮಾಡಲಾಗುತ್ತಿದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT