ಲಕ್ನೋ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾವಚಿತ್ರಕ್ಕೆ ಪಿಸ್ತೂಲ್ ನಲ್ಲಿ ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂಧೂ ಮಹಾಸಭಾ ಮಹಿಳಾ ನಾಯಕಿ ಸೇರಿದಂತೆ 13 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಮಹಾತ್ಮ ಗಾಂಧಿ ಅವರ 71ನೇ ಪುಣ್ಯತಿಥಿ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿನ ಹಿಂದೂ ಮಹಾಸಭಾ ಕಾರ್ಯಕರ್ತರು ಮಹಾತ್ಮ ಗಾಂಧಿ ಭಾವಚಿತ್ರಕ್ಕೆ ಗುಂಡು ಹೊಡೆದಿದ್ದಾರೆ.
ಈ ಘಟನೆ ನೌರಂಗಾಬಾದ್ ನಲ್ಲಿ ನಡೆದಿದ್ದು, ಈ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು, ಈ ಸಂಬಂಧ ಪೊಲೀಸರು 13 ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.