ದೇಶ

ಕೇಂದ್ರ ಬಜೆಟ್ ಅಧಿವೇಶನ: ಮೋದಿ ಸರ್ಕಾರ 'ನವ ಭಾರತ' ನಿರ್ಮಾಣಕ್ಕಾಗಿ ದುಡಿಯುತ್ತಿದೆ- ರಾಷ್ಟ್ರಪತಿ ಕೋವಿಂದ್

Manjula VN
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್'ಡಿಎ ಸರ್ಕಾರ 'ನವ ಭಾರತ' ನಿರ್ಮಾಣಕ್ಕಾಗಿ ದುಡಿಯುತ್ತಿದ್ದು, ಜನರಿಗೆ ಭರವಸೆ ನೀಡಿದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಗುರುವಾರ ಹೇಳಿದ್ದಾರೆ. 
ಪ್ರಧಾನಿ ಮೋದಿ ಸರ್ಕಾರದ ಕೊನೆಯ ಬಜೆಟ್ ಅಧಿವೇಶನ ಆರಂಭಗೊಂಡಿದ್ದು, ಸಂಸತ್ತಿನ ಜಂಟಿ ಅಧಿವೇಶನ ಉದ್ದೇಶಿಸಿ ರಾಮನಾಥ್ ಕೋವಿಂದ್ ಅವರು ಭಾಷಣ ಆರಂಭಿಸಿದ್ದಾರೆ. 
ಪ್ರತೀ ಕ್ಷೇತ್ರದಲ್ಲಿರುವ, ಎಲ್ಲಾ ರೀತಿಯ ಜನರ ಭರವಸೆಗಳು ಹಾಗೂ ಆಸೆಗಳನ್ನು ಈಡೇರಿಸಲು ಸರ್ಕಾರ ಕೆಲಸ ಮಾಡುತ್ತಿದೆ. ಮುಸ್ಲಿಂ ಮಹಿಳೆಯರು ಯಾವುದೇ ರೀತಿಯ ಭಯವಿಲ್ಲದೆ ಜೀವನ ನಡೆಸುವ ಸಲುವಾಗಿ, ಮುಸ್ಲಿಂ ಮಹಿಳೆಯರ ಸಬಲೀಕರಣಕ್ಕಾಗಿ ತ್ರಿವಳಿ ತಲಾಖ್ ಮಸೂದೆ ಜಾರಿಗೆ ತರಲು ಸರ್ಕಾರ ಯತ್ನಿಸುತ್ತಿದೆ. 2014ರ ಲೋಕಸಭಾ ಚುನಾವಣೆಗೂ ಮುನ್ನ ದೇಶ ಅನಿಶ್ಚಿತತೆಯತ್ತ ಸಾಗುತ್ತಿತ್ತು. ಚುನಾವಣೆ ಪೂರ್ಣಗೊಂಡ ಬಳಿಕ ನಮ್ಮ ಸರ್ಕಾರ ನವ ಭಾರತ ನಿರ್ಮಾಣಕ್ಕಾಗಿ ದುಡಿಯಲು ಆರಂಭಿಸಿತು ಎಂದು ಹೇಳಿದ್ದಾರೆ. 

ಸಾಕಷ್ಟು ಜನಪರ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ನಮ್ಮ ಸರ್ಕಾರ ಸಾಧನೆ ಮಾಡಿದೆ. ಪ್ರಧಾನಮಂತ್ರಿ ಜೀವನ್ ವಿಮಾ ಯೋಜನೆ 21 ಕೋಟಿ ಜನರಿಗೆ ಲಾಭವನ್ನು ತಂದಿದೆ. ಪ್ರಧಾನಮಂತ್ರಿ ಸೌಭಾಗ್ಯ ಯೋಜನೆಯಡಿಯಲ್ಲಿ 2ಕೋಟಿಗೂ ಹೆಚ್ಚು ಮನೆಗಳಿಗೆ ವಿದ್ಯುತ್ ಲಭಿಸಿದೆ. ಸ್ವಚ್ಛ ಭಾರತ ಅಭಿಯಾನ ಅಡಿಯಲ್ಲಿ ಸರ್ಕಾರ ಈ ವರೆಗೂ 9 ಕೋಟಿ ಶೌಚಾಲಯಗಳನ್ನು ನಿರ್ಮಾಣ ಮಾಡಿದೆ. ಎಂದು ತಿಳಿಸಿದ್ದಾರೆ. 
SCROLL FOR NEXT