ನಾಂದೇಡ್: ಸರ್ಕಾರಿ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಬಡಿಸಲಾದ ಮಧ್ಯಾಹ್ನದ ಬಿಸಿಯೂಟದಲ್ಲಿ ಸತ್ತ ಹಾವು ಪತ್ತೆಯಾಗಿದೆ ಎಂದು ಗುರುವಾರ ಅಧಿಕಾರಿಗಳು ತಿಳಿಸಿದ್ದಾರೆ.
ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಗರ್ಗವಾನ್ ಜಿಲ್ಲಾ ಪರಿಷತ್ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಈ ಶಾಲೆಯಲ್ಲಿ 1 ರಿಂದ 5ನೇ ತರಗತಿ ವರೆಗಿನ 80 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.
ಶಾಲಾ ಸಿಬ್ಬಂದಿ ಮಧ್ಯಾಹ್ನದ ಊಟ ಬಡಿಸಲು ಶುರು ಮಾಡುತ್ತಿದ್ದಂತೆ ಅವರಿಗೆ ಕಿಚಡಿಯಲ್ಲಿ ಹಾವು ಕಂಡು ಬಂದಿದೆ. ಹೀಗಾಗಿ ಯಾವುದೇ ವಿದ್ಯಾರ್ಥಿಗಳಿಗೆ ಇದನ್ನ ನೀಡಿಲ್ಲ ಎನ್ನಲಾಗಿದೆ.
ವಿಷಯ ತಿಳಿಯುತ್ತಿದ್ದಂತೆ ನಾಂದೇಡ್ ಜಿಲ್ಲಾ ಶಿಕ್ಷಣಾಧಿಕಾರಿ ಪ್ರಶಾಂತ್ ಶಾಲೆಗೆ ಭೇಟಿ ನೀಡಿ ಪರಿಸ್ಥಿತಿಯ ಮಾಹಿತಿ ಪಡೆದುಕೊಂಡಿದ್ದಾರೆ. ಜತಗೆ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ ತಯಾರು ಮಾಡುತ್ತಿರುವುದು ಒಂದು ಸರ್ಕಾರೇತರ ಸಂಸ್ಥೆಯಾಗಿದ್ದು, ಅದರ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.