ದೇಶ

ಬಿಹಾರ ಮಾಜಿ ಸಿಎಂ ರಾಬ್ರಿ ದೇವಿ, ಪುತ್ರಿಗೆ ಸೇರಿದ ಮೂರು ಆಸ್ತಿಗಳ ಜಪ್ತಿ

Lingaraj Badiger
ಪಾಟ್ನಾ: ಬಿಹಾರ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಹಾಗೂ ಅವರ ಪುತ್ರಿ ಹೇಮಾ ಯಾದವ್ ಅವರಿಗೆ ಸೇರಿದ ಮೂರು ನಿವೇಶನಗಳನ್ನು ಆದಾಯ ತೆರಿಗೆ ಇಲಾಖೆ ಜಪ್ತಿ ಮಾಡಿದೆ ಎಂದು ಗುರುವಾರ ಅಧಿಕಾರಿಗಳು ತಿಳಿಸಿದ್ದಾರೆ.
ಸಗುಣ ಪ್ರದೇಶದಲ್ಲಿರುವ ಮೂರು ನಿವೇಶನಗಳನ್ನು 2014ರಲ್ಲಿ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ತಮ್ಮ ಪತ್ನಿ ರಾಬ್ರಿ ದೇವಿ ಹಾಗೂ ಪುತ್ರಿಗೆ ಕಾಣಿಕೆಯಾಗಿ ನೀಡಿದ್ದು, ಅದರ ಬಗ್ಗೆ ವಿವರಣೆ ನೀಡದ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆ ಆ ಮೂರು ನಿವೇಶನಗಳನ್ನು ಜಪ್ತಿ ಮಾಡಿದೆ.
ಈ ಮೂರು ನಿವೇಶನಗಳ ದೇಣಿಗೆಗೆ ಸಂಬಂಧಿಸಿದಂತೆ ಐಟಿ ಇಲಾಖೆ ಕಳೆದ ಎರಡು ವರ್ಷಗಳಿಂದ ತನಿಖೆ ನಡೆಸುತ್ತಿದೆ.
SCROLL FOR NEXT