ದೇಶ

ನಾನು ಈಗ ಕಾಂಗ್ರೆಸ್ ಅಧ್ಯಕ್ಷ ಅಲ್ಲ, ತಡಮಾಡದೇ ಹೊಸ ಅಧ್ಯಕ್ಷರನ್ನು ನೇಮಿಸಿ: ರಾಹುಲ್ ಗಾಂಧಿ

Lingaraj Badiger
ನವದೆಹಲಿ: ನಾನು ಈಗಾಗಲೇ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಪಕ್ಷದ ಕಾರ್ಯಕಾರಿ ಸಮಿತಿ(ಸಿಡಬ್ಲ್ಯೂಸಿ) ತಡಮಾಡದೇ ಕೂಡಲೇ ಹೊಸ ಅಧ್ಯಕ್ಷರನ್ನು ನೇಮಿಸಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಬುಧವಾರ ಹೇಳಿದ್ದಾರೆ.
ಇಂದು ಸಂಸತ್ ಭವನದ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ನಾನು ಪಕ್ಷದ ಅಧ್ಯಕ್ಷನಾಗಿ ಮುಂದುವರೆಯುವುದಿಲ್ಲ. ಪಕ್ಷ ಆದಷ್ಟು ಬೇಗ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಬೇಕು. ಹೊಸ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ತಾವು ಭಾಗವಹಿಸುವುದಿಲ್ಲ ಎಂದಿದ್ದಾರೆ.
ಸಿಡಬ್ಲ್ಯೂಸಿ ಆದಷ್ಟು ಬೇಗ ಸಭೆ ಸೇರಿ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡಬೇಕು ಎಂದು ರಾಹುಲ್‌ ಗಾಂಧಿ ಅವರು ಹೇಳಿದ್ದಾರೆ.
2017ರಲ್ಲಿ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕಗೊಂಡಿದ್ದ ರಾಹುಲ್ ಗಾಂಧಿ ಅವರು 2019ರ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿನ ಹೊಣೆಹೊತ್ತು ಮೇ 25ರಂದು ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಜೀನಾಮೆ ಸಲ್ಲಿಸಿದ್ದರು. ಆದರೆ ಸಿಡಬ್ಲ್ಯುಸಿ ರಾಹುಲ್ ರಾಜೀನಾಮೆಯನ್ನು ತಿರಸ್ಕರಿಸಿತ್ತು.
ರಾಜೀನಾಮೆಯನ್ನು ಹಿಂಪಡೆಯುವಂತೆ ಪಕ್ಷದ ಹಿರಿಯ ನಾಯಕರೆಲ್ಲ ಮಾಡಿದ ಯಾವುದೇ ಪ್ರಯತ್ನಗಳು ಈ ತನಕ ಫ‌ಲಿಸಿಲ್ಲ. ಪಕ್ಷಾಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿರುವ ತನ್ನ ನಿರ್ಧಾರ ಅಚಲವಾದದ್ದು ಎಂದು ರಾಹುಲ್‌ ಗಾಂಧಿ ಈ ಮೊದಲೇ ಸ್ಪಷ್ಟಪಡಿಸಿದ್ದರು.
SCROLL FOR NEXT