ರಾಹುಲ್ ಗಾಂಧಿ 
ದೇಶ

ಭವಿಷ್ಯದಲ್ಲಿ ಕಾಂಗ್ರೆಸ್ ಬೆಳವಣಿಗೆಯ ಹೊಣೆಗಾರಿಕೆ ನಿರ್ಣಾಯಕ: ರಾಜೀನಾಮೆ ಪತ್ರದಲ್ಲಿ ರಾಹುಲ್ ಗಾಂಧಿ

ಈಗಾಗಲೇ ಕಾಂಗ್ರೆಸ್​ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಘೋಷಿಸಿದ್ದ ರಾಹುಲ್ ಗಾಂಧಿ ಅವರು ಬುಧವಾರ ತಮ್ಮ ರಾಜೀನಾಮೆ...

ನವದೆಹಲಿ: ಈಗಾಗಲೇ ಕಾಂಗ್ರೆಸ್​ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಘೋಷಿಸಿದ್ದ ರಾಹುಲ್ ಗಾಂಧಿ ಅವರು ಬುಧವಾರ ತಮ್ಮ ರಾಜೀನಾಮೆ ಪತ್ರವನ್ನು ಟ್ವಿಟರ್​ನಲ್ಲಿ ಪ್ರಕಟಿಸಿದ್ದಾರೆ.
2019 ಲೋಕಸಭೆ ಚುನಾವಣೆ ಸೋಲಿನ ಹೊಣೆ ಹೊತ್ತು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ರಾಹುಲ್ ಗಾಂಧಿ ಅವರು, ಭವಿಷ್ಯದಲ್ಲಿ ಕಾಂಗ್ರೆಸ್ ಬೆಳವಣಿಗೆಯ ಹೊಣೆಗಾರಿಕೆ ನಿರ್ಣಾಯಕವಾಗಲಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್​ ಅಧ್ಯಕ್ಷನಾಗಿ ಕೆಲಸ ಮಾಡಿದ್ದು ನನಗೆ ಸಿಕ್ಕ ದೊಡ್ಡ ಗೌರವ. 2019ರ ಲೋಕಸಭೆ ಚುನಾವಣೆಯ ಸೋಲಿನ ಬಳಿಕ ಪಕ್ಷವನ್ನು ಸದೃಢಗೊಳಿಸಬೇಕಿದೆ. ಜನರಲ್ಲಿ ಪಕ್ಷದ ಮೇಲೆ ಭರವಸೆ ಮೂಡಿಸಬೇಕಿದೆ. ಪಕ್ಷಕ್ಕೆ ಪುನಶ್ಚೇತನ ನೀಡಬೇಕಿದೆ. ಹೀಗಾಗಿ ಈ ಸ್ಥಾನಕ್ಕೆ ಮತ್ತೊಬ್ಬರನ್ನು ಆಯ್ಕೆ ಮಾಡಬೇಕಿದೆ ಎಂದು ರಾಹುಲ್​ ಗಾಂಧಿ ತಮ್ಮ ರಾಜೀನಾಮೆ ಪತ್ರದಲ್ಲಿ ಬರೆದಿದ್ದಾರೆ.
ಕಾಂಗ್ರೆಸ್ ಕಾರ್ಯಕಾರಿ ಸಮಿತಿ ತಡ ಮಾಡದೆ ಪಕ್ಷದ ನೂತನ ಅಧ್ಯಕ್ಷರ ಆಯ್ಕೆ ಮಾಡಬೇಕು. ಈ ಆಯ್ಕೆಯ ಪ್ರಕ್ರಿಯೆಲ್ಲಿ ತಾನು ಭಾಗವಾಗಿಯೂ ಇರುವುದಿಲ್ಲ ಎಂದು ರಾಹುಲ್ ಗಾಂಧಿ ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ.
ರಾಹುಲ್ ಗಾಂಧಿ ಅವರು ನೀಡಿದ ರಾಜೀನಾಮೆ ಇನ್ನೂ ಅಂಗೀಕಾರವಾಗಿಲ್ಲ. ಆದರೂ ಅವರು ತಮ್ಮ ಟ್ವಿಟ್ಟರ್ ಖಾತೆಯ ಪ್ರೋಫೈಲ್ ನಲ್ಲಿದ್ದ ಎಐಸಿಸಿ ಅಧ್ಯಕ್ಷ ಪದವನ್ನು ತೆಗೆದು, ಎಐಸಿಸಿ ಸದಸ್ಯ ಹಾಗೂ ಸಂಸದ ಎಂದು ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಹಬ್ಬಗಳ ಹೊತ್ತಲ್ಲೆ ಕಾಂಗ್ರೆಸ್‌ನಿಂದ ಜನತೆಗೆ ಮತ್ತೊಂದು ಶಾಕ್: Nandini ಹಾಲಿನ ದರ ಲೀಟರ್‌ಗೆ 8 ರೂ. ಏರಿಕೆಗೆ ಸಂಪುಟ ಸಮ್ಮತಿ!

ನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್‌ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ

'ನಾವು ಒಂದೂವರೆ ವರ್ಷ ಪ್ರೀತಿಸುತ್ತಿದ್ದೆವು': ಲಂಡನ್ ಲವ್​ ಕಹಾನಿ ನೆನೆದು ಭಾವುಕರಾದ CM ವಿಜಯ್​ ಪುತ್ರ ಜೇಸನ್!