ಹತ್ಯೆಯಾದ ದಲಿತ ದಂಪತಿ 
ದೇಶ

ತಮಿಳುನಾಡು: ಶಸ್ತ್ರ ಸಜ್ಜಿತ ಗ್ಯಾಂಗ್ ನಿಂದ ದಲಿತ ದಂಪತಿಯ ಕೊಲೆ, ಮರ್ಯಾದಾ ಹತ್ಯೆ ಶಂಕೆ

ತಮಿಳುನಾಡಿನ ತೂತುಕುಡಿಯಲ್ಲಿ ಪೋಷಕರ ವಿರೋಧದ ನಡುವೆಯೂ ಮದುವೆಯಾಗಿದ್ದ ಪ್ರೇಮಿಗಳಿಬ್ಬರನ್ನು ಶಸ್ತ್ರ ಸಜ್ಜಿತ ಗುಂಪೊಂದು ಕೊಲೆ ಮಾಡಿದ್ದು...

ತೂತುಕುಡಿ: ತಮಿಳುನಾಡಿನ ತೂತುಕುಡಿಯಲ್ಲಿ ಪೋಷಕರ ವಿರೋಧದ ನಡುವೆಯೂ ಮದುವೆಯಾಗಿದ್ದ ಪ್ರೇಮಿಗಳಿಬ್ಬರನ್ನು ಶಸ್ತ್ರ ಸಜ್ಜಿತ ಗುಂಪೊಂದು ಕೊಲೆ ಮಾಡಿದ್ದು, ಇದೊಂದು ಮರ್ಯಾದಾ ಹತ್ಯೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಈ ದಲಿತ ದಂಪತಿಯ ಹತ್ಯೆಯ ಹಿಂದೆ ಯುವತಿ ಸಂಬಂಧಿಗಳ ಕೈವಾಡವಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಹತ್ಯೆಯಾದ ದಂಪತಿಗಳನ್ನು ಟಿ ಸೋಲರಾಜ್ (23) ಮತ್ತು ಎಸ್ ಪೆಚ್ಚಾಮ್ಮಾಳ್ ಅಲಿಯಾಸ್ ಜ್ಯೋತಿ(20) ಎಂದು ಗುರುತಿಸಲಾಗಿದೆ. ವಿದ್ಯುತ್ ಇಲ್ಲದ ಹಿನ್ನೆಲೆಯಲ್ಲಿ ಮನೆಯ ಹೊರಗಡೆ ಮಲಗ್ಗಿದ್ದ ನವ ದಂಪತಿಗಳನ್ನು ದುಷ್ಕರ್ಮಿಗಳ ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಪರಯಾರ್ ಸಮುದಾಯಕ್ಕೆ ಸೇರಿದ್ದ ಸೋಲರಾಜ್ ಪಲ್ಲಾರ್ ಹುಡುಗಿ ಪೆಚ್ಚಾಮ್ಮಾಳ್ ಅವರನ್ನು ಕಳೆದ ಏಪ್ರಿಲ್ 15ರಂದು ಮದುವೆಯಾಗಿದ್ದರು. ಇಬ್ಬರು ಪೆರಿಯಾರ್ ಕಾಲೋನಿಯಲ್ಲಿ ವಾಸಿಸುತ್ತಿದ್ದರು.
ಈ ಇಬ್ಬರು ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿದ್ದರೂ ಪರಯಾರ್ ಗಿಂತ ಪಲ್ಲಾರ್ ಮೇಲಿನ ಜಾತಿ ಎಂದು ಪರಿಗಣಿಸಲಾಗುತ್ತದೆ. ಹೀಗಾಗಿ ಸೋಲರಾಜ್ ಜತೆ ಮದುವೆಗೆ ಪೆಚ್ಚಾಮ್ಮಾಳ್ ಪೋಷಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು ಎಂದು ಮೂಲಗಳು ತಿಳಿಸಿವೆ.
ಮೃತ ದೇಹಗಳನ್ನು ತೂತುಕುಡಿ ವೈದ್ಯಕೀಯ ಕಾಲೇಜ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಕೊಲತ್ತೂರ್ ಪೊಲೀಸರು, ಆರೋಪಿಗಳಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್, ಇಂದು ರಾಜೀನಾಮೆ ಅನುಮಾನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT