ದೇಶ

ಅಸ್ಸಾಂ ಕಾಂಗ್ರೆಸ್‌ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಹರೀಶ್ ರಾವತ್ ರಾಜೀನಾಮೆ

Lingaraj Badiger
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ  ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿನ ಹೊಣೆ ಹೊತ್ತು ಉತ್ತರಾಖಂಡ ಮುಖ್ಯಮಂತ್ರಿ ಹರೀಶ್ ರಾವತ್ ಅವರು ಅಸ್ಸಾಂ ಕಾಂಗ್ರೆಸ್ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಅಸ್ಸಾಂನಲ್ಲಿ, ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ 14 ರಲ್ಲಿ ಕೇವಲ ಮೂರು ಸ್ಥಾನಗಳನ್ನು ಗೆದ್ದಿದೆ. ರಾವತ್, ಗಾಂಧಿ ರಾಜೀನಾಮೆ ನಂತರ ತಮ್ಮ ಹುದ್ದೆ ತ್ಯಜಿಸಿದ ಮೊದಲ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.
ಲೋಕಸಭೆಯ ಚುನಾವಣೆಯ ಸೋಲಿಗೆ ಮತ್ತು ಪಕ್ಷ ಸಂಘಟನೆಯ ವೈಫಲ್ಯಕ್ಕೆ ತಾವು ಮತ್ತು ಪಕ್ಷದ ಇತರ ಪದಾಧಿಕಾರಿಗಳು ಹೊಣೆಯಾಗಿದ್ದು, ಈಶಾನ್ಯ ರಾಜ್ಯದಲ್ಲಿ ನಿರೀಕ್ಷಿತ ಫಲಿತಾಂಶ ದೊರೆಕಿಸಿಕೊಡಲು ಸಾಧ್ಯವಾಗಿಲ್ಲ ಎಂದು ರಾವತ್ ಹೇಳಿದ್ದಾರೆ.
SCROLL FOR NEXT