ನವದೆಹಲಿ: ಪ್ರಾದೇಶಿಕ ಭಾಷೆಗಳಲ್ಲಿ ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆ ನಡೆಸಬೇಕೆಂಬ ದಕ್ಷಿಣ ರಾಜ್ಯಗಳ ಸಂಸದರ ಬೇಡಿಕೆಗೆ ಕೇಂದ್ರಸರ್ಕಾರ ಕಡೆಗೂ ಮಣಿದಿದೆ.
ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳ ನೇಮಕಾತಿಗಾಗಿ ಐಬಿಪಿಎಸ್ ನಡೆಸುವ ಪರೀಕ್ಷೆಯನ್ನು ಇನ್ನೂ ಮುಂದೆ ಕನ್ನಡ ಸೇರಿದಂತೆ 13 ಭಾಷೆಗಳಲ್ಲಿ ಬರೆಯಲು ಅವಕಾಶ ಕಲ್ಪಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿಂದು 2018-19ರ ಆರ್ಥಿಕ ಸಮೀಕ್ಷೆ ಮಂಡನೆ ವೇಳೆ ತಿಳಿಸಿದರು.
ಅಸ್ಸಾಂ, ಬೆಂಗಾಳಿ, ಕನ್ನಡ, ಕೊಂಕಣಿ, ಮಲಯಾಳಂ, ಮಣಿಪುರಿ, ಮರಾಠಿ, ಒಡಿಯಾ , ಪಂಜಾಬಿ, ತೆಲುಗು, ತಮಿಳು ಮತ್ತು ಉರ್ದುವಿನಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡುವುದಾಗಿ ನಿರ್ಮಲಾ ಸೀತಾರಾಮನ್ ತಿಳಿಸಿದರು.
ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಲ್ಲಿನ ಆಫೀಸರ್ ಸ್ಕೆಲ್ 1 ಹಾಗೂ ಸಹಾಯಕರ ಹುದ್ದೆಗಳನ್ನು ಇಂಗ್ಲೀಷ್ ಮತ್ತು ಹಿಂದಿ ಜೊತೆಗೆ 13 ಪ್ರಾದೇಶಿಕ ಭಾಷೆಗಳಲ್ಲಿ ಬರೆಯಲು ಅವಕಾಶ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಅವರು ಹೇಳಿದರು.
ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಲ್ಲಿ ಕನ್ನಡಿಗರಿಗೂ ಅವಕಾಶ ಕಲ್ಪಿಸುವಂತೆ ಇತ್ತೀಚಿಗೆ ಸಂಸತ್ತಿನ ಉಭಯ ಸದನಗಳಲ್ಲಿ ಕರ್ನಾಟಕದ ಸಂಸದರಾದ ತೇಜಸ್ವಿ ಸೂರ್ಯ ಹಾಗೂ ಜಿ. ಸಿ. ಚಂದ್ರಶೇಖರ್ ಕೇಂದ್ರಸರ್ಕಾರವನ್ನು ಒತ್ತಾಯಿಸಿದ್ದರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos