ದೇಶ

ರಾಹುಲ್ ಗಾಂಧಿಗೆ ಬಿಗ್ ರಿಲೀಫ್: ಮಾನನಷ್ಟ ಮೊಕದ್ದಮೆ ಕೇಸು ಕೈ ಬಿಟ್ಟ ನ್ಯಾಯಾಲಯ

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೀಡಿದ್ದ ಹೇಳಿಕೆಗೆ ಕಾಂಗ್ರೆಸ್ ಸಂಸದ ...

ಮುಂಬೈ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ನೀಡಿದ್ದ ಹೇಳಿಕೆಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿರುದ್ಧ ಸಲ್ಲಿಸಲಾಗಿದ್ದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಮುಂಬೈಯ ನ್ಯಾಯಾಲಯ ಆರೋಪ ಮುಕ್ತಗೊಳಿಸಿದೆ. ಈ ಮೂಲಕ ರಾಹುಲ್ ಗಾಂಧಿಗೆ ಕೇಸಿನಲ್ಲಿ ಬಿಗ್ ರಿಲೀಫ್ ಸಿಕ್ಕಿದೆ.
15 ಸಾವಿರ ರೂಪಾಯಿ ಶ್ಯೂರಿಟಿ ಬಾಂಡ್‌ ಪಡೆದುಕೊಂಡು ನ್ಯಾಯಾಲಯ ಆರೋಪ ಮುಕ್ತಗೊಳಿಸಿದ್ದು ಮಾಜಿ ಸಂಸದ ಏಕನಾಥ್ ಗಾಯಕ್ ವಾಡ್ ರಾಹುಲ್ ಗಾಂಧಿಯವರ ಪರ ಸಹಿ ಹಾಕಿದರು. 
ಇಂದು ಬೆಳಗ್ಗೆ ಮುಂಬೈಯ ಶಿವಡಿ ಕೋರ್ಟ್ ಗೆ ರಾಹುಲ್ ಗಾಂಧಿ ಮತ್ತವರ ವಕೀಲರು ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಜರಾದರು. 
ಚುನಾವಣೆ ಪ್ರಚಾರದ ವೇಳೆ ಆಡಳಿತ ಪಕ್ಷದ ನಾಯಕರನ್ನು ಟೀಕಿಸುವಾಗ ರಾಹುಲ್ ಗಾಂಧಿಯವರು ಹೀಗೆ ಹೇಳಿದ್ದು, ಗೌರಿ ಲಂಕೇಶ್ ಹತ್ಯೆಗೆ ಬಿಜೆಪಿ-ಆರ್ ಎಸ್ಎಸ್ ಸಿದ್ದಾಂತಗಳು ಮತ್ತು ಅವುಗಳನ್ನು ಹಿಂಬಾಲಿಸುವವರು ಕಾರಣ ಎಂದು ಹೇಳಿದ್ದರಷ್ಟೆ ಹೊರತು ಇಂತವರೇ ಹತ್ಯೆಗೆ ಕಾರಣ ಎಂದು ಯಾವೊಬ್ಬ ವ್ಯಕ್ತಿಯ ಮೇಲೆ ನಿರ್ದಿಷ್ಟ ಆರೋಪ ಮಾಡಿಲ್ಲ,ಹೀಗಾಗಿ ಅವರ ವಿರುದ್ಧ ಕೇಸು ದಾಖಲಿಸುವ ಯಾವುದೇ ನಿರ್ದಿಷ್ಟ ಗುರುತರ ಸಾಕ್ಷಿಗಳಿಲ್ಲ ಎಂದು ಹೇಳಿ ನ್ಯಾಯಾಲಯ ಅವರನ್ನು ಆರೋಪ ಮುಕ್ತಗೊಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

SCROLL FOR NEXT