ಮಿಲಿಂದ್ ಡಿಯೋರಾ 
ದೇಶ

ಮಹಾರಾಷ್ಟ್ರ ಕಾಂಗ್ರೆಸ್ ಗೆ ಆಘಾತ: ಮುಂಬೈ ಕಾಂಗ್ರೆಸ್ ಮುಖ್ಯಸ್ಥ ಸ್ಥಾನಕ್ಕೆ ಮಿಲಿಂದ್ ಡಿಯೋರಾ ರಾಜೀನಾಮೆ

ಮುಂಬೈ ಕಾಂಗ್ರೆಸ್ ಅಧ್ಯಕ್ಷ ಮಿಲಿಂದ್ ಡಿಯೋರಾ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.ರಾಜೀನಾಮೆ ಬಳಿಕ ಮಾತನಾಡಿದ ಅವರು ರಾಷ್ಟ್ರಮಟ್ಟದಲ್ಲಿ ಪಕ್ಷವನ್ನು ಬಲಪಡಿಸಲು ತಾವು ಕೆಲಸ ಮಾಡುವುದಾಗಿ ಹೇಳಿದ್ದಾರೆ.

ಮುಂಬೈ: ಮುಂಬೈ ಕಾಂಗ್ರೆಸ್ ಅಧ್ಯಕ್ಷ ಮಿಲಿಂದ್ ಡಿಯೋರಾ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.ರಾಜೀನಾಮೆ ಬಳಿಕ ಮಾತನಾಡಿದ ಅವರು ರಾಷ್ಟ್ರಮಟ್ಟದಲ್ಲಿ ಪಕ್ಷವನ್ನು ಬಲಪಡಿಸಲು ತಾವು ಕೆಲಸ ಮಾಡುವುದಾಗಿ ಹೇಳಿದ್ದಾರೆ.
ಈ ವರ್ಷಾಂತದಲ್ಲಿ ಮಹಾರಾಷ್ಟ್ರ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು ಅಲ್ಲಿಯವರೆಗೆ ಮುಂಬೈ ನಗರದ ಪಕ್ಷದ ಘಟಕದ ಮೇಲ್ವಿಚಾರಣೆಗೆ ಮೂರು ಹಿರಿಯ ಕಾಂಗ್ರೆಸ್ ಮುಖಂಡರನ್ನು ಒಳಗೊಂಡ ತಾತ್ಕಾಲಿಕ ನಾಯಕತ್ವವನ್ನು ಸ್ಥಾಪಿಸಲು ಅವರು ಶಿಫಾರಸು ಮಾಡಿದರು.
ಭಾನುವಾರ ಅವರ ಕಛೇರಿ ಬಿಡುಗಡೆಗೊಳಿಸಿದ ಬಿಜೆಪಿ-ಶಿವಸೇನಾ ಮೈತ್ರಿಯನ್ನು ಹಿಂದಿಕ್ಕಿ ಪಕ್ಷವನ್ನು ಸಂಘಟಿಸುವುದು ತಮಗೆ ಸವಾಲಾಗಿದೆ ಎಂದಿದ್ದಾರೆ. ಜೂನ್ 26 ರಂದು ನವದೆಹಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಭೇಟಿಯಾದ ಬಳಿಕ ತಾವು ಹುದ್ದೆ ತ್ಯಜಿಸುವ ನಿರ್ಧಾರಕ್ಕೆ ಬಂದದ್ದಾಗಿ ಡಿಯೋರಾ ಹೇಳಿದ್ದಾರೆ.
ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ಮಲ್ಲಿಕರ್ಜುನ್ ಖರ್ಗೆ ಮತ್ತು ಕೆ ಸಿ ವೇಣುಗೋಪಾಲ್ ಅವರಿಗೆ ತಮ್ಮ ರಾಜೀನಾಮೆ ವಿಚಾರ ತಿಳಿಸಲಾಗಿದೆ ಎಂದು ಅವರು ಹೇಳಿಕೆಯಲ್ಲಿ ವಿವರಿಸಿದ್ದಾರೆ.
ಲೋಕಸಭಾ ಚುನಾವಣೆ ಫಲಿತಾಂಶದ ನಂತರ ರಾಜಕೀಯ ಸನ್ನಿವೇಶಗಳು ಬದಲಾಗಿದ್ದು "ಈ ಸಮಯದಲ್ಲಿ ಬೇಡಿಕೆಯಿರುವ ಸ್ಥಾನಗಳಿಗೆ  ನಾವೆಲ್ಲರೂ ಸಿದ್ಧರಾಗಬೇಕಾಗಿದೆ" ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್